ಸರ್ಕಾರಿ ಕಚೇರಿಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರಿಸಲು ಯಡಿಯೂರಪ್ಪ ಸೂಚನೆ

Team Udayavani, Jun 3, 2020, 1:56 PM IST

ಸರ್ಕಾರಿ ಕಚೇರಿಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರಿಸಲು ಯಡಿಯೂರಪ್ಪ ಸೂಚನೆ

ಬೆಂಗಳೂರು: ರಾಜ್ಯ ಮಟ್ಟದ ಹಲವಾರು ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಗುರುತಿಸಿ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರಿಸುವುದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಗತವಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದರು.

ಇಂದು ಅವರ ಅಧ್ಯಕ್ಷತೆಯಲ್ಲಿ  ನಡೆದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಮುಂದಿನ ಸಭೆಯೊಳಗೆ ಹಲವಾರು ಕಚೇರಿಗಳು ಅಲ್ಲಿ ಕೆಲಸ ನಿರ್ವಹಿಸುವುದನ್ನು ಖುದ್ದಾಗಿ ಪರಿಶೀಲಿಸುವುದಾಗಿ ಅವರು ಎಚ್ಚರಿಸಿದರು.

ಪ್ರವಾಹದಿಂದ ಹಾಳಾದ ರಸ್ತೆ/ಸೇತುವೆಗಳ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದಲ್ಲಿ ಪ್ರವಾಹ ಕಾಮಗಾರಿಗಳನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ  ಕೈಗೊಂಡಿದ್ದು,  ಪ್ರವಾಹದಿಂದ ಹಾಳಾಗಿರುವ 1800 ರಸ್ತೆ ಕಾಮಗಾರಿಗಳ ಪೈಕಿ 1700 ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ.  ಸೇತುವೆ ನಿರ್ಮಾಣ/ ದುರಸ್ಥಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇಂಜಿನಿಯರ್ ಗಳ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ ನಿರುದ್ಯೋಗಿ ಇಂಜಿನಿಯರ್‍ ಗಳನ್ನು ಟ್ರೈನಿಗಳೆಂದು ನೇಮಕ ಮಾಡಲು ಮುಖ್ಯಮಂತ್ರಿಗಳು ಆದೇಶಿಸಿದರು.

ಶಿವಮೊಗ್ಗ ನಗರದ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು. ವಿಜಯಪುರ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಜಮೀನನ್ನು ಈಗಾಗಲೇ ಗುರುತಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದ 1650 ಕಿ.ಮೀ ಉದ್ದದ ಗ್ರಾಮೀಣ ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಹಾಗೂ 10,110 ಕಿ.ಮೀ ಜಿಲ್ಲಾ ಮುಖ್ಯ ರಸ್ತೆಯನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ವಿವಿಧ ಇಂಜಿನಿಯರಿಂಗ್ ಇಲಾಖೆಗಳ ದರಪಟ್ಟಿಯನ್ನು ಪರಿಶೀಲಿಸಿ ರಾಜ್ಯಾದ್ಯಾಂತ ಏಕರೂಪ ದರಪಟ್ಟಿಯನ್ನು ಪ್ರಕಟಿಸಲು ಇಲಾಖೆಯ ನಿವೃತ್ತ ಅಧಿಕಾರಿಗಳ ತಾಂತ್ರಿಕ ಸಮಿತಿ ಅಧ್ಯಯನ ನಡೆಸುತ್ತಿದ್ದು, ಶೀಘ್ರದಲ್ಲಿಯೇ ವರದಿ ಸಲ್ಲಿಸಲಿದ್ದಾರೆ.  ಏಕರೂಪ ದರಪಟ್ಟಿ ಹೊರಬಂದಲ್ಲಿ ಇಲಾಖೆಗೆ ನೂರಾರು ಕೋಟಿ ರೂ.ಗಳನ್ನು ಸರ್ಕಾರಕ್ಕೆ ಉಳಿಸಬಹುದಾಗಿದೆ ಎಂದು  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ರಾಜ್ಯದಲ್ಲಿ ಒಟ್ಟು 4813 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳನ್ನು 30675 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಂತರ್ಜಲ ವೃದ್ಧಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಸೇತುವೆಗಳ ತಳಭಾಗದಲ್ಲಿ ಒಂದು ಮೀಟರ್ ತಡೆಗೋಡೆ ನಿರ್ಮಿಸಿ  ನೀರಿನ ಸಂಗ್ರಹಣೆ ಮಾಡಲು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.