ಯಡಿಯೂರಪ್ಪ , ವಿಜಯೇಂದ್ರ ಆಪ್ತರಿಗೇ ನಿಗಮ, ಮಂಡಳಿ ಮಣೆ
ಸಂಪುಟ ಕಸರತ್ತಿಗೆ ಮುನ್ನ ನಡೆಯಿತು ನೇಮಕ
Team Udayavani, Nov 25, 2020, 1:16 AM IST
ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕಸರತ್ತಿನ ನಡುವೆಯೇ 14 ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಪ್ತರಿಗೆ ಸ್ಥಾನ ಕಲ್ಪಿಸಲಾಗಿದೆ.
ಪಕ್ಷದ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೋಮವಾರ ಸಿಎಂ ಯಡಿಯೂರಪ್ಪ ಅವರ ಜತೆ ಚರ್ಚಿಸಿದ ಅನಂತರ ನಿಗಮ-ಮಂಡಳಿಗಳ ನೇಮಕ ಆದೇಶ ಹೊರಬಿದ್ದಿರುವುದು ಕುತೂಹಲ ಮೂಡಿಸಿದೆ.
ಸಚಿವ ಸ್ಥಾನದ ಆಕಾಂಕ್ಷಿ, ಬಿಎಸ್‌ವೈ ಆಪ್ತ ವಲಯದ ಶಾಸಕ ಎಸ್.ಆರ್. ವಿಶ್ವನಾಥ್‌ಗೆ ಬಿಡಿಎ ಅಧ್ಯಕ್ಷಗಿರಿ, ಪರಿಷತ್ ಸ್ಥಾನದ ಆಕಾಂಕ್ಷಿಯಾಗಿದ್ದ ಬಿ.ಎಸ್. ಪರಮಶಿವಯ್ಯ ಅವರಿಗೆ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಇನ್ನುಳಿದವರೂ ಸಿಎಂ ಮತ್ತು ವಿಜಯೇಂದ್ರ ಅವರಿಗೆ ಆಪ್ತರೇ ಆಗಿದ್ದಾರೆ.
ತರಾತುರಿಯಲ್ಲಿ ನೇಮಕ
ಪಕ್ಷದ ಮೂಲಗಳ ಪ್ರಕಾರ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಮುನ್ನ ನಿಗಮ, ಮಂಡಳಿಗಳಿಗೆ ನೇಮಕ ಮಾಡಬೇಕು ಎಂಬುದು ಚರ್ಚೆಯಾಗಿತ್ತು. ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವಕಾಶ ಕೊಡಬೇಕು ಎಂಬ ತೀರ್ಮಾನವಾಗಿತ್ತು. ಅದರಂತೆ ನೇಮಕ ಮಾಡಲಾಗಿದೆ ಎಂದು ಹೇಳಲಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹತ್ತು ವರ್ಷಗಳ ಬಳಿಕ ನಗದು, ಚಿನ್ನಾಭರಣ ದೋಚಿದ್ದ ಮನೆಗಳ್ಳ ಬಂಧನ
ಅಮಿತ್ ಶಾ ಆಗಮನಕ್ಕೂ ಮುನ್ನ ಬೆಳಗಾವಿ ಬಿಜೆಪಿಯಲ್ಲಿ ಮೂಲ- ವಲಸಿಗ ವಿವಾದ
ಸ್ವತ್ಛತೆ ನಿರ್ವಹಣೆ ಲೋಪ: ನಗರಸಭೆ ಅಧಿಕಾರಿಗಳಿಗೆ ತರಾಟ
ಬೇವಿನ ಮರದಲ್ಲಿ ಹಾಲಿನ ನೊರೆಯಂತೆ ನೀರು : ಕೆಜಿಎಫ್ ತಾ.ಐವಾರಹಳ್ಳಿ ಗ್ರಾಮದಲ್ಲಿ ಘಟನೆ
ಸಾಲ ವಾಪಸ್ ಕೇಳಿದ ವೃದ್ಧೆಯನ್ನೇ ಕೊಂದು ಬಾವಿಗೆ ಎಸೆದ್ರು : ಇಬ್ಬರು ಆರೋಪಿಗಳು ಸೆರೆ