ಬಿಜೆಪಿ ಸಿಎಂ ಅಭ್ಯರ್ಥಿ BSY; ಶಾ ಮತ್ತೆ ಘೋಷಣೆ, ಈಶ್ವರಪ್ಪಗೆ ಮುಖಭಂಗ
Team Udayavani, May 26, 2017, 6:15 PM IST
ಬೆಂಗಳೂರು: ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ ಯಡಿಯೂರಪ್ಪನವರೇ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಮತ್ತೊಮ್ಮೆ ಘೋಷಣೆ ಮಾಡುವ ಮೂಲಕ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಮತ್ತು ವಿರೋಧಿ ಪಾಳಯಕ್ಕೆ ಭಾರೀ ಮುಖಭಂಗವಾದಂತಾಗಿದೆ.
ರಾಯಣ್ಣ ಬ್ರಿಗೇಡ್ ನಿಂದಾಗಿ ಕೆಎಸ್ ಈಶ್ವರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಡುವೆ ಶೀತಲ ಸಮರ ನಡೆಯುತ್ತಿದ್ದು, ಬಿಜೆಪಿ ಹೈಕಮಾಂಡ್ ನ ಮಧ್ಯಪ್ರವೇಶದಿಂದಾಗಿ ಇಬ್ಬರ ನಡುವಿನ ಮುನಿಸು ತಣ್ಣಗಾಗಿತ್ತು. ಅಲ್ಲದೇ ಬ್ರಿಗೇಡ್ ಚಟುವಟಿಕೆಯಲ್ಲಿ ತೊಡಗಿಕೊಳ್ಳಬಾರದು ಎಂದು ಈಶ್ವರಪ್ಪಗೆ ತಾಕೀತು ಮಾಡಿತ್ತು. ಆದರೆ ಆರ್ ಎಸ್ ಎಸ್ ನ ಸಂತೋಷ್ ಹಾಗೂ ಬಿಜೆಪಿ ಪಕ್ಷದೊಳಗೆ ಅಸಮಾಧಾನದ ಹೊಗೆ ಮುಂದುವರಿದಿತ್ತು.
ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬಿಎಸ್ ಯಡಿಯೂರಪ್ಪನವರೇ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಸಿಎಂ ಅಭ್ಯರ್ಥಿ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ಪಿಟಿಐ ನಡೆಸಿದ ಸಂವಾದದ ವೇಳೆಯಲ್ಲಿ ಕರ್ನಾಟಕದ ಕುರಿತು ಕೇಳಿದ ಪ್ರಶ್ನೆಗೆ ಅಮಿತ್ ಶಾ ಈ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ