ಯುವ ಕಾಂಗ್ರೆಸ್ ಪ್ರತಿಭಟನೆ ವೇಳೆ ಕಾರ್ಯಕರ್ತೆಯ ಕಾಲಿಗೆ ಬೆಂಕಿ
Team Udayavani, Oct 7, 2017, 2:28 PM IST
ಬೆಂಗಳೂರು: ನಗರದ ಆನಂದ್ ರಾವ್ ಸರ್ಕಲ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ಯುವ ಕಾಂಗ್ರೆಸ್ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಅವಘಡವೊಂದು ಸಂಭವಿಸಿದ್ದು, ಕಾರ್ಯಕರ್ತೆಯೊಬ್ಬರು ಬೆಂಕಿ ತಗುಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಿಎಸ್ಟಿ,ಮತ್ತು ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ರಸ್ತೆಯಲ್ಲಿ ಬೃಹತ್ ಪಾತ್ರೆಗಳನ್ನಿಟ್ಟು ಕಟ್ಟಿಗೆ ಬಳಸಿ ಅಡುಗೆ ಮಾಡಲು ಮುಂದಾಗಿದ್ದರು. ಈ ವೇಳೆ ಪೆಟ್ರೋಲ್ ಬಳಸಲಾಗಿದ್ದು, ಭಗ್ಗನೆ ಹೊತ್ತಿಕೊಂಡ ಬೆಂಕಿ ಸಮಂತಾ ಎಂಬ ಕಾರ್ಯಕರ್ತೆಯ ಕಾಲಿಗೆ ಆವರಿಸಿಕೊಂಡಿದೆ.ಕಂಗಾಲಾದ ಆಕೆ ರಸ್ತೆಯಲ್ಲೇ ಬಿದ್ದಿದ್ದಾರೆ.
ಕೂಡಲೆ ಸ್ಥಳದಲ್ಲಿದ್ದ ಕಾರ್ಯಕರ್ತರು ಬೆಂಕಿ ನಂದಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸಮಂತಾ ಕಾಲಿಗೆ ಗಂಭೀರ ಸ್ವರೂಪದ ಸುಟ್ಟಗಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ