ಶಾಸಕ ಜಮೀರ್ ಅಹಮದ್ ಖಾನ್ ಗೆ ಕೋವಿಡ್ ಸೋಂಕು ದೃಢ
Team Udayavani, Aug 18, 2020, 3:28 PM IST
ಬೆಂಗಳೂರು: ಶಾಸಕ ಜಮೀರ್ ಅಹಮದ್ ಖಾನ್ ಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಬಗ್ಗೆ ಸ್ವತಃ ಜಮೀರ್ ಅಹಮದ್ ಟ್ವಿಟ್ಟರ್ ನಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ.
ಟ್ವೀಟ್ ಮಾಡಿರುವ ಶಾಸಕ ಜಮೀರ್ ಅಹಮದ್, ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೋವಿಡ್-19 ಸೋಂಕು ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ. pic.twitter.com/GYENfTI13R
— B Z Zameer Ahmed Khan (@BZZameerAhmedK) August 18, 2020