ಸೌದಿ ಅರೇಬಿಯಾ; ಅಗ್ನಿ ದುರಂತದಲ್ಲಿ 10 ಮಂದಿ ಭಾರತೀಯರು ಬಲಿ
Team Udayavani, Jul 13, 2017, 11:14 AM IST
ನವದೆಹಲಿ/ರಿಯಾದ್: ಅಗ್ನಿ ದುರಂತದಲ್ಲಿ ಸುಮಾರು 10 ಮಂದಿ ಭಾರತೀಯರು ಸಾವನ್ನಪ್ಪಿರುವ ಘಟನೆ ಸೌದಿ ಅರೇಬಿಯಾದ ನಜ್ರಾನ್ ಪಟ್ಟಣದಲ್ಲಿ ಬುಧವಾರ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹಾಗೂ ಗಾಯಗೊಂಡವರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ.
ಕಿಟಕಿ ಇಲ್ಲದ ಮನೆಯೊಂದರಲ್ಲಿ ಸಂಭವಿಸಿದ ಭಾರೀ ಅಗ್ನಿ ಅನಾಹುತದಿಂದ ಈ ಘಟನೆ ನಡೆದಿದೆ. ದುರಂತ ನಡೆದ ಸ್ಥಳಕ್ಕೆ ಜೆಡ್ಡಾದಲ್ಲಿ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ತೆರಳಿರುವುದಾಗಿ ಸುಷ್ಮಾ ತಿಳಿಸಿದ್ದಾರೆ.
ನಿಜ್ರಾನ್ ನಲ್ಲಿ ನಡೆದಿರುವ ಅಗ್ನಿ ಅನಾಹುತದ ಬಗ್ಗೆ ಮಾಹಿತಿ ಬಂದಿದೆ. ಘಟನೆಯಲ್ಲಿ ಸುಮಾರು 10 ಮಂದಿ ಭಾರತೀಯರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದು, ಅವರೆಲ್ಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ