ಬಸ್ ಚಲಿಸುವ ವೇಳೆ ಕುಸಿದ ರಸ್ತೆ: ಹತ್ತು ಪ್ರಯಾಣಿಕರು ನಾಪತ್ತೆ

Team Udayavani, Jan 14, 2020, 10:27 AM IST

ಶಾಂಘೈ (ಚೀನಾ): ಬಸ್ಸೊಂದು ಸಂಚರಿಸುತ್ತಿದ್ದ ವೇಳೆಯೇ ರಸ್ತೆ ಕುಸಿದು ಹೋದ ಪರಿಣಾಮ ಬಸ್ ನಲ್ಲಿದ್ದ ಕನಿಷ್ಠ ಹತ್ತು ಪ್ರಯಾಣಿಕರು ನಾಪತ್ತೆಯಾದ ಘಟನೆ ಚೀನಾದ ಶಾಂಘೈನಲ್ಲಿ ನಡೆದಿದೆ.

ಈ ಅವಗಢ ಸೋಮವಾರ ಸಂಜೆಯ ವೇಳೆಗೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಗ್ರೇಟ್ ವಾಲ್ ಆಸ್ಪತ್ರೆಗೆ ಮುಂಭಾಗದಲ್ಲಿ ರಸ್ತೆಯ ಒಂದು ಭಾಗ ಕುಸಿದು ಕಂದಕ ಉಂಟಾಗಿದೆ. ಅದೇ ವೇಳೆ ಅಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕ ಸಂಸ್ಥೆಯ ಬಸ್ ಅದರೊಳಗೆ ಬಿದ್ದಿದೆ. ಬಸ್ ಬಿದ್ದ ರಭಸಕ್ಕೆ ಅದು ಸ್ಫೋಟಗೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸ್ಥಳೀಯರ ಪ್ರಕಾರ ಕನಿಷ್ಠ ಹತ್ತು ಜನರು ನಾಪತ್ತೆಯಾಗಿದ್ದಾರೆ. ಮತ್ತು 15 ಜನರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಕ್ಷಣಾ ಕಾರ್ಯ ಮುಂದುವರಿದಿದೆ. ಘಟನೆಯ ಬಗ್ಗೆ ತನಿಖೆಯೂ ಆರಂಭವಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ