Wedding Bus: ಮದುವೆ ಮನೆ ಬಸ್ ಪಲ್ಟಿ; 10 ಮಂದಿ ದಾರುಣ ಸಾವು
Team Udayavani, Jun 12, 2023, 9:37 AM IST
ಸಿಡ್ನಿ: ಮದುವೆ ಮುಗಿಸಿ ಬರುತ್ತಿದ್ದ ಬಸ್ಸೊಂದು ಪಲ್ಟಿಯಾಗಿ 10 ಮಂದಿ ಮೃತಪಟ್ಟು,11 ಮಂದಿಗೆ ಗಾಯಗಳಾದ ಘಟನೆ ಸಿಡ್ನಿಯ ಉತ್ತರದ ಹಂಟರ್ ವೈನ್ ಪ್ರದೇಶದಲ್ಲಿ ರವಿವಾರ ರಾತ್ರಿ (ಜೂ.11 ರಂದು) ನಡೆದಿರುವುದು ವರದಿಯಾಗಿದೆ.
ರವಿವಾರ ರಾತ್ರಿ ಸ್ಥಳೀಯ ಸಮಯದ ಪ್ರಕಾರ 11:30 (23:30) ರ ಹೊತ್ತಿಗೆ ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಹೆದ್ದಾರಿಯಲ್ಲಿ ಬಸ್ ತಿರುಗಿಸುವಾಗ ಉರುಳಿ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ 10 ಮಂದಿ ಮೃತಪಟ್ಟಿದ್ದು, 11 ಮಂದಿಗೆ ಗಾಯಗಳಾಗಿವೆ. ಇದರಲ್ಲಿ ಇಬ್ಬರನ್ನು ಏರ್ ಲಿಫ್ಟ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: Bharamasagara: ಲಾರಿಯನ್ನು ಓವರ್ಟೇಕ್ ಮಾಡುವ ಭರದಲ್ಲಿ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು
ಅಪಘಾತದ ಸಮಯದಲ್ಲಿ ರಸ್ತೆಯಲ್ಲಿ ತುಂಬಾ ಮಂಜು ಇತ್ತು ಎನ್ನಲಾಗಿದೆ. 58 ವರ್ಷದ ಚಾಲಕನನ್ನು ಪೊಲೀಸರು ಬಂಧಿಸಿದ್ದು, ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬೇನ್ಸ್ ಘಟನೆಗೆ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್
China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು
Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!