ವ್ಯಾನಿಗೆ ಟ್ರಕ್ ಢಿಕ್ಕಿ : ಮಹಿಳೆ, ನಾಲ್ವರು ಮಕ್ಕಳು ಸೇರಿ 13 ಮಂದಿಯ ದಾರುಣ ಸಾವು
Team Udayavani, Jun 3, 2019, 11:11 AM IST
ಕರಾಚಿ : ಪಾಕಿಸ್ಥಾನದ ಬಲೂಚಿಸ್ಥಾನ ಪ್ರಾಂತ್ಯದಲ್ಲಿ ನಿನ್ನೆ ಭಾನುವಾರ ತಡ ರಾತ್ರಿ ಸಂಭವಿಸಿದ ವ್ಯಾನ್-ಟ್ರಕ್ ಢಿಕ್ಕಿಯಲ್ಲಿ ಓರ್ವ ಮಹಿಳೆ ಮತ್ತು ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 13 ಮಂದಿ ಮೃತಪಟ್ಟ ಘಟನೆ ವರದಿಯಾಗಿದೆ.
ವ್ಯಾನು ಕ್ವೆಟ್ಟಾದಿಂದ ಝೋಹಬ್ ಕಡೆಗೆ ಹೋಗುತ್ತಿತ್ತು. ಅಲಿ ಖೇಲ್ ಪ್ರದೇಶದಲ್ಲಿ ವ್ಯಾನಿಗೆ ಟ್ರಕ್ ಹೊಡೆಯಿತು. ಪರಿಣಾಮವಾಗಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 13 ಮಂದಿ ಮೃತಪಟ್ಟ ಇತರ ಅನೇಕರು ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ತಿಳಿದೊಡನೆಯೇ ರಕ್ಷಣಾ ತಂಡದವರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು. ಪೊಲೀಸರು ಇಡಿಯ ಪ್ರದೇಶವನ್ನು ಸುತ್ತುವರಿದಿದ್ದು ಘಟನೆಯ ಬಗ್ಗೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪಾಕಿಸ್ಥಾನದಲ್ಲಿ ಅತ್ಯಂತ ಕೆಟ್ಟ ಸ್ಥಿತಿಯಲ್ಲಿರುವ ರಸ್ತೆಗಳಲ್ಲಿ ಘನ ವಾಹನಗಳ ಚಾಲಕರು ನಿರ್ಲಕ್ಷ್ಯದ ಚಾಲನೆ ಮಾಡಿ ಅಪಘಾತ ಎಸಗುವುದು ಸಾಮಾನ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ