14 ಪ್ರಯಾಣಿಕರ ಗುಂಡಿಕ್ಕಿ ಕೊಂದ ಉಗ್ರರು

Team Udayavani, Apr 19, 2019, 6:27 AM IST

ಕರಾಚಿ: ಪಾಕಿಸ್ಥಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬಸ್ಸುಗಳ ಮೇಲೆ ದಾಳಿ ನಡೆಸಿದ ಭಯೋತ್ಪಾದಕರು, ನೌಕಾ ಪಡೆಯ ಸಿಬಂದಿ ಸೇರಿ 14 ಪ್ರಯಾಣಿಕರನ್ನು ಹತ್ಯೆಗೈದಿದ್ದಾರೆ. ಗುರುವಾರ ಬೆಳಗ್ಗೆ ಕರಾಚಿಯಿಂದ ಗ್ವಾದಾರ್‌ಗೆ ತೆರಳುತ್ತಿದ್ದ 6 ಬಸ್ಸುಗಳನ್ನು ಹೆದ್ದಾರಿ ಮಧ್ಯೆ ತಡೆದ 15ರಿಂದ 20 ಉಗ್ರರ ತಂಡ, ಬಸ್ಸಲ್ಲಿದ್ದವರನ್ನು ಕೆಳಕ್ಕಿಳಿಸಿ ಗುಂಡಿನ ಮಳೆಗೆರೆದಿದೆ. ಪರಿಣಾಮ, 14 ಪ್ರಯಾಣಿಕರು ಸಾವಿಗೀ ಡಾಗಿದ್ದಾರೆ. ಇಬ್ಬರು ಪಾರಾಗಿದ್ದಾರೆ.

ಉಗ್ರರು ಅರೆಸೇನಾ ಪಡೆಯ ಸೈನಿಕರಂತೆ ಸಮವಸ್ತ್ರ ಧರಿಸಿದ್ದರು. ಹೀಗಾಗಿ, ಸೈನಿಕರೇ ಬಸ್ಸುಗಳನ್ನು ತಪಾಸಣೆಗೆಂದು ತಡೆಯುತ್ತಿದ್ದಾರೆ ಎಂದೇ ಎಲ್ಲರೂ ಭಾವಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಲ್ಲಿ ನೌಕಾಪಡೆ ಮತ್ತು ಕರಾವಳಿ ರಕ್ಷಕ ಪಡೆಯ ತಲಾ ಒಬ್ಬರು ಸೇರಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

  • ಅಗರ್ತಲಾ: ನಿಷೇಧಿತ ಉಗ್ರ ಸಂಘಟನೆ ಜಮಾತ್‌ ಉಲ್‌ ಮುಜಾಹಿದೀನ್‌ ಬಾಂಗ್ಲಾದೇಶ (ಜೆಎಂಬಿ) ಪಶ್ಚಿಮ ರಾಜ್ಯಗಳಲ್ಲಿ ನೆಲೆಯೂರಲು ಯತ್ನಿಸಿತ್ತು ಎಂದು ಗೃಹ ಸಚಿವಾಲಯದ...

  • ಲಂಡನ್‌: ಡಿಯಾಜಿಯೋ ಕಂಪೆನಿ ಜೊತೆಗಿನ ಪ್ರಕರಣವೊಂದರಲ್ಲಿ ಉದ್ಯಮಿ ವಿಜಯ್‌ ಮಲ್ಯ ವಿರುದ್ಧ ಇಂಗ್ಲೆಂಡ್‌ ಹೈಕೋರ್ಟ್‌ ತೀರ್ಪು ನೀಡಿದ ಪರಿಣಾಮ 90 ಕೋಟಿ ರೂ. ನಷ್ಟವನ್ನು...

  • ಕಠ್ಮಂಡು: ಈ ಬಾರಿ ಮೌಂಟ್‌ ಎವರೆಸ್ಟ್‌ ಏರುವ ಸಾಹಸಿಗರಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಕಳೆದ ವಾರ ಮೂವರು ಭಾರತೀಯರು ಸಾವನ್ನಪ್ಪಿದ್ದರು. ಶನಿವಾರ ಬ್ರಿಟನ್‌ನ...

  • ವಾಷಿಂಗ್ಟನ್‌: ಮುಂದಿನ ತಿಂಗಳು ಜಪಾನ್‌ನಲ್ಲಿ ಜಿ-20 ಶೃಂಗ ನಡೆಯಲಿದ್ದು, ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಟ್ರಂಪ್‌ ಭೇಟಿ ನಡೆಯಲಿದೆ. ಇಲ್ಲಿ...

  • ಕೈರೋ: ಇರಾಕ್‌ ಹಾಗೂ ಸಿರಿಯಾದಲ್ಲಿ ಅಮೆರಿಕದ ಸೇನಾ ದಾಳಿಯಿಂದಾಗಿ ನೆಲೆ ಕಳೆದುಕೊಂಡಿರುವ ಐಸಿಸ್‌ ಉಗ್ರರು ಈಗ ಗೆರಿಲ್ಲಾ ಯುದ್ಧ ತಂತ್ರ ಗಳನ್ನು ಅಳವಡಿಸಿ ಕೊಳ್ಳುವ...

ಹೊಸ ಸೇರ್ಪಡೆ