ಮಿಲಿಟರಿ ವಿಮಾನ ದುರಂತ, 15 ಮಂದಿ ಸಾವು; ಓರ್ವ ಪವಾಡಸದೃಶ ಪಾರು!
Team Udayavani, Jan 14, 2019, 10:12 AM IST
ಟೆಹ್ರಾನ್: ಪ್ರತಿಕೂಲ ಹವಾಮಾನದಿಂದಾಗಿ 707 ಮಿಲಿಟರಿ ಕಾರ್ಗೋ ವಿಮಾನ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, ಒಬ್ಬರು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸೋಮವಾರ ಇರಾನ್ ನ ಫಾತ್ ವಿಮಾನ ನಿಲ್ದಾಣ ಸಮೀಪ ನಡೆದಿದೆ.
ಫಾರ್ಸ್ಸ್ ನ್ಯೂಸ್ ಏಜೆನ್ಸಿ ವರದಿ ಪ್ರಕಾರ, ಮಿಲಿಟರಿ ವಿಮಾನದಲ್ಲಿ ಒಟ್ಟು 16 ಮಂದಿ ಇದ್ದಿದ್ದು, ವಿಮಾನದ ಇಂಜಿನಿಯರ್ ಮಾತ್ರ ಘಟನೆಯಲ್ಲಿ ಬದುಕಿ ಉಳಿದಿರುವುದಾಗಿ ಇರಾನ್ ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.
ಮಿಲಿಟರಿ ವಿಮಾನ ಪ್ರತಿಕೂಲ ಹವಾಮಾನದಿಂದಾಗಿ ರನ್ ವೇ ತಲುಪಲು ವಿಫಲವಾಗಿದ್ದು, ಜನವಸತಿ ಇರುವ ಕಾಂಪ್ಲೆಕ್ಸ್ ವೊಂದಕ್ಕೆ ಡಿಕ್ಕಿ ಹೊಡೆದಿತ್ತು. ಇದರ ಪರಿಣಾಮ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿತ್ತು ಎಂದು ಮಿಲಿಟರಿ ನೀಡಿರುವ ಪ್ರಕಟಣೆಯಲ್ಲಿ ವಿವರಿಸಿದೆ. ಆದರೆ ಮತ್ತೊಂದು ವರದಿ ಪ್ರಕಾರ ಪೈಲಟ್ ತಪ್ಪಿನಿಂದಾಗಿ ಈ ದುರಂತ ಸಂಭವಿಸಿದೆ ಎಂದು ಹೇಳಿದೆ.
ಘಟನೆಯಲ್ಲಿ ಬದುಕಿ ಉಳಿದಿರುವ ಇಂಜಿನಿಯರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದುರಂತ ನಡೆದ ಸ್ಥಳಕ್ಕೆ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?