ಮುಖಾಮುಖಿ ಢಿಕ್ಕಿಯಾಗಿ ಕಂದಕಕ್ಕೆ ಉರುಳಿದ ಬಸ್ – ಕಾರು : ಕನಿಷ್ಠ 30 ಮಂದಿ ಮೃತ್ಯು
Team Udayavani, Feb 8, 2023, 9:04 AM IST
ಕರಾಚಿ: ಬಸ್ – ಕಾರು ನಡುವೆ ಢಿಕ್ಕಿ ಸಂಭವಿಸಿ ಕನಿಷ್ಠ 30 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಕೊಹಿಸ್ತಾನ್ ಜಿಲ್ಲೆಯಲ್ಲಿ ಮಂಗಳವಾರ (ಫೆ.7 ರಂದು) ನಡೆದಿದೆ ಎಂದು ವರದಿಯಾಗಿದೆ.
ಬಸ್ ಗಿಲ್ಗಿಟ್‌ನಿಂದ ರಾವಲ್ಪಿಂಡಿಗೆ ಬರುತ್ತಿತ್ತು, ಈ ವೇಳೆ ಎದುರುಗಡೆ ಬಂದ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ಕಾರು ಹಾಗೂ ಬಸ್ ಎರಡೂ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ 15 ಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿದ್ದಾರೆ.
ಘಟನೆ ನಡೆದ ಕೆಲ ಸಮಯದ ಬಳಿಕ ರಕ್ಷಣಾ ಕಾರ್ಯಚರಣೆ ಆರಂಭಿಸಿ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಸಿದ್ಧಾರ್ಥ್ ವೆಡ್ಸ್ ಕಿಯಾರಾ: ದಾಂಪತ್ಯಕ್ಕೆ ಕಾಲಿಟ್ಟ ʼಶೇರ್ ಷಾʼ ಜೋಡಿ
ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಮೃತರಿಗೆ ಸಂತಾಪ ಸೂಚಿಸಿ, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕೂಡಲೇ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಾಕಿಸ್ತಾನದಲ್ಲಿ ರಸ್ತೆ ಅಪಘಾತಗಳು ಇತ್ತೀಚೆಗೆ ಸಾಮಾನ್ಯವಾಗಿದ್ದು, ಕಳಪೆ ರಸ್ತೆಗಳು, ಕಳಪೆ ನಿರ್ವಹಣೆಯಿಂದ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ. ಕಳೆದ ತಿಂಗಳು, ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಪ್ರಯಾಣಿಕರ ಕೋಚ್ ಕಂದಕಕ್ಕೆ ಬಿದ್ದು ಕನಿಷ್ಠ 41 ಜನರು ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ 19 ಮಂದಿ ಮೃತ್ಯು: 4 ದಿನದಲ್ಲಿ 5ನೇ ಘಟನೆ
ವಾಟ್ಸಾಪ್ ನಲ್ಲಿ ಧರ್ಮನಿಂದನೆ ಬಗ್ಗೆ ಪೋಸ್ಟ್ ಹಾಕಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ
ಅಮೆರಿಕಾದಲ್ಲಿ ಭಾರತೀಯ ಪತ್ರಕರ್ತನ ಮೇಲೆ ಖಲಿಸ್ತಾನಿ ಬೆಂಬಲಿಗರ ಹಲ್ಲೆ, ನಿಂದನೆ
ಟ್ರಂಪ್ ವಿರುದ್ಧ ಶೀಘ್ರ ಬಂಧನ ಆದೇಶ? ಅಶ್ಲೀಲ ನಟಿ ಜತೆಗಿನ ಸಂಬಂಧ ಮುಚ್ಚಿಟ್ಟ ಆರೋಪ
ಗೋಧಿಗಾಗಿ ಮುಗಿಬಿದ್ದ ಜನ ಪಾಕ್‌ನಲ್ಲಿ 4 ಮಂದಿ ಸಾವು !