ಉಗ್ರರ ಅಟ್ಟಹಾಸ :ಗಾಜಾದಲ್ಲಿ 35 ಜನ, ಇಸ್ರೇಲಿನಲ್ಲಿ ಭಾರತೀಯ ಮಹಿಳೆ ಸೇರಿ 3 ಸಾವು
Team Udayavani, May 12, 2021, 7:47 AM IST
ಜೆರುಸಲೇಂ: ಹಮಾಸ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ಮುಂದುವರೆದಿದೆ. ಮಂಗಳವಾರ ರಾತ್ರಿ ಭಯೋತ್ಪಾದಕ ಸಂಘಟನೆ ಹಮಾಸ್ ನಡೆಸಿದ ರಾಕೆಟ್ ದಾಳಿಗೆ ಗಾಜಾದಲ್ಲಿ 35 ಜನರು ಹಾಗೂ ಇಸ್ರೇಲಿನಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.
ಗಾಜಾ ಮೂಲದ ಉಗ್ರರು ಸೋಮವಾರ ಸಂಜೆಯಿಂದ ಇಸ್ರೇಲ್ ಮೇಲೆ ನೂರಾರು ರಾಕೆಟ್ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದಿ ಉಗ್ರರ ನೆಲೆ ಮೇಲೆ ಇಸ್ರೇಲ್ ಕೂಡ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಮಹಿಳೆ ಸಾವು :
ರಾಕೆಟ್ ದಾಳಿಯಲ್ಲಿ ಇಸ್ರೇಲ್ನಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಕೇರಳದ ಇಡುಕ್ಕಿ ಜಿಲ್ಲೆಯ ಸೌಮ್ಯ ಸಂತೋಷ್ ಮೃತಪಟ್ಟಿದ್ದಾಳೆ. ದಕ್ಷಿಣ ಇಸ್ರೇಲ್ನ ಕರಾವಳಿ ನಗರವಾದ ಅಶ್ಕೆಲೋನ್ನ ಮನೆಯೊಂದರಲ್ಲಿ ವೃದ್ಧರೊಬ್ಬರಿಗೆ ಆರೈಕೆ ಮಾಡುವ ಕೆಲಸ ಮಾಡುತ್ತಿದ್ದರು. ಉಗ್ರರು ನಡೆಸಿದ ರಾಕೆಟ್ ದಾಳಿಯು ನೇರವಾಗಿ ವೃದ್ಧೆಯ ಮನೆಗೆ ಅಪ್ಪಳಿಸಿತ್ತು. ಈ ವೇಳೆ 80 ವರ್ಷದ ವೃದ್ಧೆಯ ಆರೈಕೆ ಮಾಡುತ್ತಿದ್ದ ಕೇರಳ ಮೂಲದ ಮಹಿಳೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ