ಢಾಕಾ ಕೆಮಿಕಲ್ ಗೋದಾಮಿಗೆ ಬೆಂಕಿ: 69 ಬಲಿ, ಹಲವರು ಗಂಭೀರ
Team Udayavani, Feb 21, 2019, 4:45 AM IST
ಢಾಕಾ : ಭೀಕರ ಬೆಂಕಿ ಅವಘಡಕ್ಕೆ 69 ಜನರು ಬಲಿಯಾದ ಘಟನೆ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಬುಧವಾರ ರಾತ್ರಿ ನಡೆದಿದೆ. ಕೆಮಿಕಲ್ ಗೊದಾಮು, ಪ್ಲಾಸ್ಟಿಕ್ ಗೋದಾಮು ಸೇರಿದಂತೆ ಹಲವು ಕಟ್ಟಡಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಹಳೇ ಢಾಕಾದ ಚೌಕ್ ಬಾಜಾರ್ ಎಂಬ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದ್ದು, ಹಾಜೀ ವಾಹೀದ್ ಮ್ಯಾನ್ಶನ್ ಎಂಬ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ ನಡೆದು ನಾಲ್ಕು ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ.
ಹಾಜೀ ವಾಹೀದ್ ಮ್ಯಾನ್ಶನ್ ನ ಕೆಳ ಮಹಡಿಯಲ್ಲಿರುವ ರಾಸಾಯನಿಕ ಗೋದಾಮಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕಟ್ಟಡದ ಇತರ ಮಹಡಿಗಳಿಗೆ ಮತ್ತು ಸಮೀಪದ ಕಟ್ಟಡಗಳಿಗೂ ಬೆಂಕಿಯ ಕೆನ್ನಾಲಿಗೆ ಚಾಚಿದೆ.
ಸುಮಾರು 69 ಜನರು ಈ ದುರ್ಘಟನೆ ಗೆ ಬಲಿಯಾಗಿದ್ದು, ಮೃತರ ಸಂಖ್ಯೆ ಹೆಚ್ಚುವ ಸಂಭವವಿದೆ ಎನ್ನಲಾಗಿದೆ. ಕಟ್ಟಡದಲ್ಲಿ ಇನ್ನೂ ಹಲವು ಜನರು ಸಿಲುಕಿರುವ ಸಾಧ್ಯತೆಯಿದ್ದು, ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಲು ಮತ್ತು ಅಪಾಯದಲ್ಲಿ ಸಿಲುಕಿರುವ ರಕ್ಷಣೆಗೆ ಹರಸಾಹಸ ಪಡುತ್ತಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ