ಕಾಬೂಲ್ನಲ್ಲಿ ಬಾಂಬ್ ಸ್ಫೋಟ | 50 ಜನರ ದುರ್ಮರಣ
Team Udayavani, Oct 8, 2021, 6:13 PM IST
ಕಾಬೂಲ್: ತಾಲಿಬಾನ್ ಹಿಡಿತದಲ್ಲಿರುವ ಅಪ್ಘಾನಿಸ್ತಾನದಲ್ಲಿ ಶುಕ್ರವಾರ ಬಾಂಬ್ ಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ ಸುಮಾರು 50 ಜನರು ಸಾವನ್ನಪ್ಪಿದ್ದಾರೆ.
ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಇಲ್ಲಿಯವರೆಗೆ ಆಸ್ಪತ್ರೆಯಲ್ಲಿ 35 ಮೃತದೇಹಗಳು ಮತ್ತು 50ಕ್ಕೂ ಹೆಚ್ಚು ಗಾಯಗೊಂಡ ಜನರನ್ನು ದಾಖಲಿಸಿಕೊಂಡಿದ್ದೇವೆ ಎಂದು ಕುಂಡುಜ್ ಸೆಂಟ್ರಲ್ ಆಸ್ಪತ್ರೆಯ ವೈದ್ಯರೊಬ್ಬರು ಹೇಳಿದ್ದಾರೆ.
ಡಾಕ್ಟರ್ಸ್ ವಿಥೌಟ್ ಬಾರ್ಡರ್ಸ್(ಎಂಎಸ್ಎಫ್) ನಡೆಸುತ್ತಿರುವ ಇನ್ನೊಂದು ಆಸ್ಪತ್ರೆ ಕನಿಷ್ಠ 15 ಜನರ ಮೃತದೇಹಗಳನ್ನು ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.
ನಮ್ಮ ಶಿಯಾ ದೇಶವಾಸಿಗಳ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದರು.
ದಾಳಿಯ ಹೊಣೆಗಾರಿಕೆಯನ್ನು ಇಲ್ಲಿಯವರೆಗೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ ತಾಲಿಬಾನ್ನ ಕಡು ಪ್ರತಿಸ್ಪರ್ಧಿಗಳಾದ ಇಸ್ಲಾಮಿಕ್ ಸ್ಟೇಟ್ ಗುಂಪು ದಾಳಿ ಮಾಡಿರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು