ಪಾಕಿಸ್ಥಾನ ತೊರೆದ ಅಸಿಯಾ ಬೀಬಿ ವಕೀಲ
Team Udayavani, Nov 5, 2018, 6:00 AM IST
ಇಸ್ಲಾಮಾಬಾದ್: ಕಳೆದ ಕೆಲವು ದಿನಗಳಿಂದ ಧರ್ಮನಿಂದನೆ ಆರೋಪದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಅಸಿಯಾ ಬೀಬಿ ವಿರುದ್ಧ ಪಾಕಿಸ್ಥಾನದಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಈಕೆಯ ಪರವಾಗಿ ವಕಾಲತ್ತು ವಹಿಸಿದ್ದ ಸೈಫುಲ್ ಮಲೂಕ್ ಪ್ರಾಣ ಭೀತಿಯಿಂದ ದೇಶ ತೊರೆದಿದ್ದಾರೆ.
ಇಸ್ಲಾಂ ಮೂಲಭೂತವಾದಿಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಪ್ರಮುಖ ನಗರ ಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ನನಗೆ ಜೀವ ಬೆದರಿಕೆಯಿದೆ. ಇಂತಹ ಸನ್ನಿವೇಶದಲ್ಲಿ ವಕೀಲಿಕೆ ಸಾಧ್ಯವಾಗುತ್ತಿಲ್ಲ. ಕುಟುಂಬಕ್ಕೆ ಸರಕಾರ ಭದ್ರತೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅಲ್ಲದೆ ನನಗೆ ಸೇನೆಯು ಭದ್ರತೆ ಒದಗಿಸಿ ದರೆ ಆಸಿಯಾ ಪರ ವಕಾಲತು ವಹಿಸಲು ವಾಪಸಾಗು ತ್ತೇನೆ ಎಂದೂ ಅವರು ಹೇಳಿದ್ದಾರೆ. ಈ ಮಧ್ಯೆ ಆಸಿಯಾ ಕೂಡ ದೇಶ ತೊರೆಯಲು ಯತ್ನಿಸುತ್ತಿದ್ದು, ಕಾಗದ ಪತ್ರಗಳನ್ನು ಸಲ್ಲಿಸಿ ಅನುಮತಿಗಾಗಿ ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು