ಉಗ್ರ ಪಟ್ಟಿಗೆ ಅಜರ್: ಚೀನಾ ಮತ್ತೆ ಅಡ್ಡಿ
Team Udayavani, Mar 14, 2019, 12:30 AM IST
ವಿಶ್ವಸಂಸ್ಥೆ: ಪುಲ್ವಾಮಾ ದಾಳಿಯ ರೂವಾರಿ, ಜೈಶ್ ಎ ಮೊಹಮ್ಮದ್ ಭಯೋತ್ಪಾದನಾ ಸಂಘಟನೆಯ ಸ್ಥಾಪಕ ಮಸೂದ್ ಅಜರ್ನನ್ನು ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರಿಸುವ ಭಾರತದ ಪ್ರಯತ್ನಕ್ಕೆ ಸತತ ನಾಲ್ಕನೇ ಬಾರಿಗೆ ಚೀನಾ ತಡೆಯೊಡ್ಡಿದೆ.
ಈ ಮೂಲಕ ತನ್ನ ಪರಮಾಪ್ತ ದೇಶ ಪಾಕಿಸ್ತಾನಕ್ಕೆ ಬೆಂಬಲ ನೀಡುವ ತನ್ನ ಕಳ್ಳಾಟವನ್ನು ಮುಂದುವರಿಸಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಬುಧವಾರ ತಡರಾತ್ರಿ ನಡೆದ ಮತದಾನದ ವೇಳೆ, ಚೀನಾ ಮಸೂದ್ ಅಜರ್ನನ್ನು ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರಿಸಲು ವಿರೋಧ ವ್ಯಕ್ತಪಡಿಸಿತು. ನಿಷೇಧಿಸಲು ಇನ್ನಷ್ಟು ಸಾಕ್ಷ್ಯ, ಸಮಯಾವಕಾಶ ಬೇಕು ಎಂದು ಹೇಳಿತು.
ಈಗಾಗಲೇ ಭಾರತ, ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿರುವ ಅಮೆರಿಕ, ಯು.ಕೆ., ಫ್ರಾನ್ಸ್, ರಷ್ಯಾದ ಬೆಂಬಲ ಪಡೆದಿತ್ತು. ಅಲ್ಲದೆ ಬುಧವಾರ ಫ್ರಾನ್ಸ್, ಅಮೆರಿಕ ಮತ್ತು ಇಂಗ್ಲೆಂಡ್ ದೇಶಗಳೇ ಮಸೂದ್ನನ್ನು ನಿಷೇಧಿಸುವ ಪ್ರಸ್ತಾಪ ಮಂಡಿಸಿದ್ದವು. ಈ ಬೆಳವಣಿಗೆ ನಂತರ ಮಾತನಾಡಿರುವ ಭಾರತ ವಿದೇಶಾಂಗ ಇಲಾಖೆ, ಚೀನಾದ ನಡೆ ಅಸಮಾಧಾನ ತಂದಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ