ಭೂತಾನ್‌ ವಿದ್ಯಾರ್ಥಿಗಳಿಗಿದೆ ವಿಶೇಷ ಸಾಮರ್ಥ್ಯ

Team Udayavani, Aug 19, 2019, 6:23 AM IST

bhootan

ಥಿಂಪು: ಭೂತಾನ್‌ ವಿದ್ಯಾರ್ಥಿಗಳು ಅದ್ಭುತ ಸಾಧನೆಗೈಯುವ ಸಾಮರ್ಥ್ಯ ಹೊಂದಿದ್ದಾರೆ. ಇದಕ್ಕೆ ಭಾರತ ಎಲ್ಲ ಬೆಂಬಲ ಹಾಗೂ ನೆರವನ್ನೂ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಭೂತಾನ್‌ನ ರಾಯಲ್‌ ವಿಶ್ವವಿದ್ಯಾಲಯದಲ್ಲಿ ಹೇಳಿದ್ದಾರೆ.

ಭೂತಾನ್‌ ಭೇಟಿಯ ಕೊನೆಯ ದಿನವಾದ ರವಿವಾರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತ ನಾಡಿದ ಅವರು, ಭೂತಾನ್‌ನ ಪ್ರತಿ ಭಾವಂತ ವಿದ್ಯಾರ್ಥಿಗಳು ಪರಿಶ್ರಮ ವಹಿಸಿ ಸಾಧನೆ ಮಾಡುವ ಸಾಧ್ಯತೆ ಹೊಂದಿದ್ದಾರೆ.

ಯುವಕರಿಗೆ ಈಗ ಹೆಚ್ಚಿನ ಅವಕಾಶಗಳಿವೆ. ನಿಮ್ಮ ಅಂತಹಸ್ಥೈರ್ಯದಿಂದ ಶ್ರಮಿಸಿ. ನಿಮ್ಮ ಜತೆಗೆ ಭಾರತದ 130 ಕೋಟಿ ಸ್ನೇಹಿತರಿದ್ದಾರೆ. ಇವರು ನಿಮ್ಮನ್ನು ಪ್ರೋತ್ಸಾಹಿಸುತ್ತಾರೆ ಎಂದು ಹೇಳಿದ್ದಾರೆ. ಭೂತಾನ್‌ ವಿಶ್ವವಿದ್ಯಾಲಯಗಳೊಂದಿಗೆ ನಮ್ಮ ವಿವಿಗಳು, ಸಂಶೋಧನೆ ವಿವಿಗಳು, ಲೈಬ್ರರಿಗಳು ಸುರಕ್ಷಿತ ಮತ್ತು ತ್ವರಿತ ಸಂಪರ್ಕ ಒದಗಿಸುತ್ತವೆ. ಈ ಮೂಲಕ ಜ್ಞಾನವರ್ಧನೆ ಇನ್ನಷ್ಟು ತ್ವರಿತವಾ ಗಲಿದೆ ಎಂದೂ ಹೇಳಿದರು. ಭೂತಾನ್‌ ಇಡೀ ಮನುಕುಲಕ್ಕೆ ಖುಷಿಯ ಸಂದೇಶವನ್ನು ನೀಡುತ್ತಿದೆ. ಜಗತ್ತಿನ ಯಾವುದೇ ದೇಶಕ್ಕೆ ತೆರಳಿ ಭೂತಾನ್‌ ಎಂದರೆ ನಿಮಗೆ ಯಾವುದು ನೆನಪಾಗುತ್ತದೆ ಎಂದು ಕೇಳಿದರೆ, ಅವರು ಭೂತಾನ್‌ನ ಒಟ್ಟು ರಾಷ್ಟ್ರೀಯ ಸಂತೃಪ್ತಿಯ ಸೂಚ್ಯಂಕ ಎಂದು ಹೇಳುತ್ತಾರೆ ಎಂದು ಮೋದಿ ಹೇಳಿದ್ದಾರೆ. ಭೂತಾನ್‌ ಮತ್ತು ಭಾರತದ ಮಧ್ಯೆ ನೈಸರ್ಗಿಕ ಸಂಬಂಧವಿದೆ. ಎರಡೂ ದೇಶಗಳ ಜನರ ಇತಿಹಾಸ, ಸಂಸ್ಕೃತಿ ಮತ್ತು ಧಾರ್ಮಿಕ ಸಂಪ್ರದಾಯಗಳು ಒಂದಕ್ಕೊಂದು ಬೆಸೆದು ಕೊಂಡಿವೆ. ಗೌತಮ ಬುದ್ಧನಾಗಿ ಸಿದ್ದಾರ್ಥ ಪರಿವರ್ತನೆಯಾಗಿ ಇಡೀ ಜಗತ್ತಿಗೆ ಬೌದ್ಧ ಧರ್ಮವನ್ನು ಸಾರಿದ ನೆಲ ನಮ್ಮದು. ಆ ಬುದ್ಧ ಹೊತ್ತಿಸಿದ ಕಿಡಿಯನ್ನು ಭೂತಾನ್‌ನಲ್ಲಿ ತಲೆ ತಲೆಮಾರುಗಳ ಗುರುಗಳು ಹಾಗೂ ಧಾರ್ಮಿಕ ನಾಯಕರು ಕಾಯ್ದುಕೊಂಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಹೃದಯಗಳ ಬೆಸುಗೆ: ಮೋದಿ ಭೇಟಿ ಅತ್ಯಂತ ಯಶಸ್ವಿಯಾಗಿದ್ದು, ಇದು ಕೇವಲ ಔಪಚಾರಿಕ ಭೇಟಿಯಷ್ಟೇ ಅಲ್ಲ, ಹೃದಯಗಳ ಮಿಲನವಾ ಗಿತ್ತು ಎಂದು ಭೂತಾನ್‌ ಪ್ರಧಾನಿ ಶೆರಿಂಗ್‌ ಹೇಳಿ ದ್ದಾರೆ. ಶಿಕ್ಷಕರು, ವಿದ್ಯಾರ್ಥಿಗಳಂತೂ ಪ್ರಧಾನಿ ಯನ್ನು ಸ್ವಾಗತಿಸಲು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದರು. ಇಲ್ಲಿನ ದೇವರುಗಳಂತೂ 2 ದಿನ ಮಳೆ ತಡೆದು ಸಹಕರಿಸಿದ್ದಾರೆ ಎಂದಿದ್ದಾರೆ.

23ರಿಂದ ಯುಎಇ ಪ್ರವಾಸ: ಇದೇ 23ರಿಂದ ಪ್ರಧಾನಿ ಮೋದಿ 3 ದಿನಗಳ ಕಾಲ ಯುಎಇ ಮತ್ತು ಬಹರೈನ್‌ ಪ್ರವಾಸ ಕೈಗೊಳ್ಳಲಿದ್ದಾರೆ. ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಚಾರಗಳ ಕುರಿತು ಈ ವೇಳೆ ಚರ್ಚಿಸಲಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.