ಅಫ್ಘಾನಿಸ್ಥಾನದಲ್ಲಿ ಮತ್ತಷ್ಟು ಸ್ಫೋಟ
Team Udayavani, Aug 20, 2019, 5:26 AM IST
ಕಾಬೂಲ್: ಅಫ್ಘಾನಿಸ್ಥಾನದಲ್ಲಿ ಶನಿವಾರ ರಾತ್ರಿ ಮದುವೆ ಸಮಾರಂಭದ ಮೇಲೆ ನಡೆದ ದಾಳಿಯ ಅನಂತರದಲ್ಲಿ ಸೋಮವಾರ ಜಲಾಲಾಬಾದ್ನಲ್ಲಿ ಸರಣಿ ಬಾಂಬ್ ಸ್ಫೋಟ ನಡೆದಿದೆ. ಸ್ವಾತಂತ್ರ್ಯದ 100ನೇ ವರ್ಷಾಚರಣೆಯ ದಿನವೇ ನಡೆದ ಹತ್ತಕ್ಕೂ ಹೆಚ್ಚು ಸ್ಫೋಟಗಳಲ್ಲಿ 34ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಭಾಗದಲ್ಲಿ ಇಸ್ಲಾಮಿಕ್ ಸ್ಟೇಟ್ ಮತ್ತು ತಾಲಿಬಾನ್ ಉಗ್ರರ ಪ್ರಭಾವವಿದ್ದು, ಇವರೇ ಈ ಕೃತ್ಯ ಎಸಗಿರುವ ಶಂಕೆ ಇದೆ. ಶನಿವಾರದ ಕಾಬೂಲ್ ಸ್ಫೋಟದಲ್ಲಿ 63 ಜನರು ಸಾವನ್ನಪ್ಪಿದ್ದರು. ಇದರ ಹೊಣೆಯನ್ನು ಐಸಿಸ್ ಹೊತ್ತುಕೊಂಡಿತ್ತು.
ಜಲಾಲಾಬಾದ್ನ ಮಾರ್ಕೆಟ್ನಲ್ಲಿ ಬಾಂಬ್ಗಳನ್ನು ಇಡಲಾಗಿತ್ತು. ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿ ಮಾರುಕಟ್ಟೆಗೆ ಜನರು ಆಗಮಿಸುತ್ತಿದ್ದಂತೆಯೇ ಬಾಂಬ್ ಸ್ಫೋಟಗೊಂಡಿದೆ. ಮುಂದಿನ ವರ್ಷದೊಳಗೆ ಅಫ್ಘಾನಿಸ್ಥಾನದಿಂದ ಅಮೆರಿಕ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿ ಕೊಳ್ಳಲು ಮಾತುಕತೆ ಅಂತಿಮಗೊಳ್ಳುತ್ತಿದ್ದಂತೆಯೇ ಈ ಸ್ಫೋಟ ನಡೆಯುತ್ತಿರುವುದು ಆತಂಕ ಮೂಡಿಸಿದೆ. ಮತ್ತೆ ಇಡೀ ದೇಶ ತಾಲಿಬಾನ್, ಐಸಿಸ್ ಕಪಿಮುಷ್ಟಿಗೆ ಸಿಲುಕುವ ಆತಂಕವೂ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್