ಬ್ರಿಟನ್ ಆರೋಗ್ಯ ಸಚಿವೆಗೂ ತಗುಲಿದ ಕೊರೊನಾ ಸೋಂಕು: ವಾರದ ಹಿಂದಷ್ಟೇ ಪ್ರಧಾನಿಯನ್ನು ಭೇಟಿ !
Team Udayavani, Mar 11, 2020, 8:02 AM IST
ಲಂಡನ್: ಬ್ರಿಟಿಷ್ ಕಿರಿಯ ಆರೋಗ್ಯ ಸಚಿವೆ ನಾಡಿನ್ ಡೋರಿಸ್ ಅವರಿಗೂ ಕೊರೊನಾ ವೈರಸ್ ತಗುಲಿದ್ದು ಈ ಕುರಿತು ಹೇಳಿಕೆಯನ್ನು ನೀಡಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಮಾತ್ರವಲ್ಲದೆ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಸಚಿವರು ಸೋಂಕುವಿಗೆ ತುತ್ತಾಗಿದ್ದಾರೆಯೇ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ.
ನನಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಹಾಗಾಗಿ ಮನೆಯಲ್ಲಿಯೇ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದೇನೆ. ಮುನ್ನೇಚ್ಚರಿಕೆಗಾಗಿ ಈ ವಿಚಾರವನಬ್ನು ಬಹಿರಂಗಪಡಿಸಿದ್ದೇನೆ ಎಂದು ಡೋರಿಸ್ ತಿಳಿಸಿದ್ದಾರೆ.
ಸ್ಥಳೀಯ ಆರೋಗ್ಯ ಅಧಿಕಾರಿಗಳು ಮಾಹಿತಿಯಂತೆ ಡೋರಿಸ್ ಅವರು ನಸದನದಲ್ಲಿ ನೂರಕ್ಕಿಂತ ಹೆಚ್ಚು ಜನರನ್ನು ಭೇಟಿಯಾಗಿದ್ದು ಮಾತ್ರವಲ್ಲದೆ ಪ್ರಧಾನಿ ಬೋರಿಸ್ ಜಾನ್ಸನ್ ರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು ಎಂದು ಇಂಡಿಯಾ ಟುಡೆ ವರದಿ ತಿಳಿಸಿದೆ.
ಬ್ರಿಟನ್ ನಲ್ಲಿ ಈಗಾಗಲೇ ಕೊರೊನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದು, 373 ಜನರಲ್ಲಿ ವೈರಾಣು ಧೃಢಪಟ್ಟಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ