ಅಫ್ಘಾನ್ ಗೆ ಆರ್ಥಿಕ ಕಾರಿಡಾರ್ ವಿಸ್ತರಣೆ
Team Udayavani, Sep 11, 2018, 10:59 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ಅರ್ಥ ವ್ಯವಸ್ಥೆಯ ಮೇಲೆ ಪಾಕಿಸ್ಥಾನ-ಚೀನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದ್ದರೂ, ಯೋಜನೆಯನ್ನು ಅಫ್ಘಾನಿಸ್ಥಾನಕ್ಕೆ ವಿಸ್ತರಿಸಲು ಎರಡೂ ರಾಷ್ಟ್ರಗಳು ಒಪ್ಪಿಕೊಂಡಿವೆ.
ಚೀನ ವಿದೇಶಾಂಗ ಸಚಿವ ವಾಂಗ್ ಇ ಪಾಕ್ ಭೇಟಿ ವೇಳೆ ಈ ಕುರಿತು ನಿರ್ಧರಿಸಲಾಗಿದೆ. ಪಾಕಿಸ್ಥಾನದಲ್ಲಿ ಇಮ್ರಾನ್ ಖಾನ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಚೀನದ ಉನ್ನತಮಟ್ಟದ ನಿಯೋಗ ಭೇಟಿ ನೀಡಿ ವಿವಿಧ ವಿಚಾರಗಳ ಕುರಿತು ಚರ್ಚಿಸಿದೆ. ಎರಡೂ ದೇಶಗಳ ನಡುವೆ ಎಲ್ಲಾ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ವೃದ್ಧಿಸಿಕೊಳ್ಳಲೂ ನಿರ್ಧರಿಸಲಾಗಿದೆ ಎಂದು ಚೀನ ಹೇಳಿದೆ.
ಸಿಪಿಇಸಿ ಯೋಜನೆ ಪೂರ್ಣಗೊಳಿಸುವುದಕ್ಕೆ ಸರಕಾರ ಬದ್ಧವಾಗಿದೆ. ಚೀನ ಜತೆಗಿನ ಬಾಂಧವ್ಯ ದೇಶದ ವಿದೇಶಾಂಗ ನೀತಿಯ ಪ್ರಧಾನ ಅಂಶ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಂಚನೆ ಪ್ರಕರಣ: ನೀರವ್ ಮೋದಿ ಭಾರತಕ್ಕೆ ಗಡಿಪಾರು: ಬ್ರಿಟನ್ ಕೋರ್ಟ್ ತೀರ್ಪು
ಪತ್ನಿಯ ಮನೆಗೆಲಸಕ್ಕೆ ಪರಿಹಾರ ನೀಡಿ: ಕೋರ್ಟ್ ತೀರ್ಪು
ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್ ಆರೋಪ
ಆತ್ಮಹತ್ಯೆಗೆ ಬ್ರೇಕ್ ಹಾಕಲು ‘ಲೋನ್ಲಿನೆಸ್ ಮಿನಿಸ್ಟರ್’ನ್ನು ಸಂಪುಟಕ್ಕೆ ಸೇರಿಸಿಕೊಂಡ ಜಪಾನ್!
ಪ್ರಪಾತಕ್ಕುರುಳಿದ ಟೈಗರ್ ವುಡ್ಸ್ ಕಾರು: ಗಂಭೀರ ಗಾಯಗೊಂಡ ಪ್ರಸಿದ್ಧ ಗಾಲ್ಫರ್