ಜನವರಿ ನಂತರ, ಮೊದಲ ಬಾರಿಗೆ ಚೀನಾದಲ್ಲಿ ಸೋಂಕಿನಿಂದ ಯಾರೂ ಮೃತರಾಗಿಲ್ಲ: ವರದಿ
Team Udayavani, Apr 7, 2020, 9:25 AM IST
ಬೀಜಿಂಗ್: ಜಗತ್ತಿನೆಲ್ಲೆಡೆ ಕೋವಿಡ್-19 ವೈರಸ್ ಹರಡಲು ಕಾರಣವಾದ ಚೀನಾದಲ್ಲಿ ಜನವರಿ ನಂತರ ಇದೇ ಮೊದಲ ಬಾರಿಗೆ ಹೊಸ ಸಾವಿನ ಪ್ರಕರಣ ವರದಿಯಾಗಿಲ್ಲ. ಮಂಗಳವಾರ ದೇಶದಲ್ಲಿ ಸೋಂಕಿನಿಂದ ಯಾರೂ ಕೂಡ ಮೃತರಾಗಿಲ್ಲ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ.
ಜನವರಿಯಿಂದ ನಿರಂತರವಾಗಿ ಚೀನಾದಲ್ಲಿ ಸಾವಿನ ಸಂಖ್ಯೆ ಏರು ಗತಿಯಲ್ಲಿ ಸಾಗಿದ್ದವು. ಆದರೆ ಮಾರ್ಚ್ ನಿಂದ ಇದರ ಪ್ರಮಾಣ ಇಳಿಮುಖವಾಗಿತ್ತು. ಮಂಗಳವಾರ ಇದೇ ಮೊದಲ ಬಾರಿಗೆ ಯಾವುದೇ ಸಾವು ಸಂಭವಿಸಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೇ 32 ಹೊಸ ಸೋಂಕಿತರು ಮಂಗಳವಾರ ಪತ್ತೆಯಾಗಿದ್ದಾರೆ.
ಆದರೇ ಚೀನಾದಲ್ಲಿ ಎರಡನೇ ಬಾರಿಗೆ ಕೋವಿಡ್-19 ತನ್ನ ಪ್ರತಾಪವನ್ನು ಆರಂಭಿಸುವ ಲಕ್ಷಣಗಳು ಗೋಚರಿಸುತ್ತಿದ್ದು, ವಿದೇಶಗಳಿಂದ ಚೀನಾಕ್ಕೆ ಹಿಂದಿರುಗುತ್ತಿರುವವರಿಂದ ವೈರಸ್ ಹರಡುತ್ತಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಹೊಸ ಸೋಂಕಿತ ಪ್ರಮಾಣ 1000 ದ ಗಡಿ ದಾಟಿದೆ ಎಂದು ಇದೇ ವೇಳೆ ತಿಳಿಸಲಾಗಿದೆ.
ಚೀನಾದಲ್ಲಿ ಇವರೆಗೂ 3,331 ಜನರು ಈ ಮಾರಣಾಂತಿಕ ವೈರಸ್ ಗೆ ಬಲಿಯಾಗಿದ್ದು, 81,740 ಜನರು ಸೋಂಕಿಗೆ ತುತ್ತಾಗಿದ್ದಾರೆ. ಈ ವೈರಸ್ ಮೊದಲ ಬಾರಿಗೆ ಕಂಡುಬಂದ ವುಹಾನ್ ಪ್ರಾಂತ್ಯದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ