ಭಾರತೀಯರ ಕೈಲಾಸ ಮಾನಸ ಸರೋವರ ಯಾತ್ರೆಗೆ ಚೀನಾದಿಂದ ತಡೆ
Team Udayavani, Jun 26, 2017, 6:08 PM IST
ಬೀಜಿಂಗ್: ಕೈಲಾಸ ಮಾನಸಸರೋವರ ಯಾತ್ರೆಗೆ ತೆರಳಿದ್ದ ಭಾರತೀಯ ಯಾತ್ರಾರ್ಥಿಗಳನ್ನು ಚೀನಾ ವಾಪಸ್ ಕಳುಹಿಸಿದ್ದು, ಯಾವ ಕಾರಣದಿಂದ ಯಾತ್ರೆಗೆ ತಡೆ ನೀಡಲಾಗಿದೆ ಎಂಬುದನ್ನು ತಿಳಿಸಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳ ವಿದೇಶಾಂಗ ಸಚಿವಾಲಯ ಸಂಪರ್ಕದಲ್ಲಿ ಇದ್ದಿರುವುದಾಗಿ ಮಾಧ್ಯಮದ ವರದಿ ವಿವರಿಸಿದೆ.
ಮಾನಸ ಸರೋವರ ಯಾತ್ರಾರ್ಥಿಗಳನ್ನು ತಡೆದಿರುವ ವಿಷಯದ ಕುರಿತು ಭಾರತ ಮತ್ತು ಚೀನಾದ ವಿದೇಶಾಂಗ ಸಚಿವಾಲಯ ಪರಸ್ಪರ ಸಂಪರ್ಕದಲ್ಲಿವೆ ಎಂದು ಚೀನಾ ವಿದೇಶಾಂಗ ಸಚಿವಾಲಯ ವಕ್ತಾರ ಜೆಂಗ್ ಶುವಾಂಗ್ ತಿಳಿಸಿದ್ದಾರೆ.
ಕಳೆದ ವಾರ ಮಾನಸ ಸರೋವರ ಯಾತ್ರೆಗಾಗಿ ತೆರಳಿದ್ದ 47 ಮಂದಿ ಭಾರತೀಯರನ್ನು ಚೀನಾ ಅಧಿಕಾರಿಗಳು ಅಂತಾರಾಷ್ಟ್ರೀಯ ಗಡಿಯಲ್ಲಿ ತಡೆದು ನಿಲ್ಲಿಸಿತ್ತು. ಸಿಕ್ಕಿಂನ ನಾಥು ಲಾ ಪಾಸ್ ನಿಂದ ಮಾನಸ ಸರೋವರದತ್ತ ತೆರಳಲು ಭಾರತೀಯ ಯಾತ್ರಾರ್ಥಿಗಳಿಗೆ ಕೆಲವು ತೊಂದರೆಗಳಿದ್ದವು. ಅದಕ್ಕಾಗಿ ಚೀನಾದ ಜೊತೆ ಮಾತುಕತೆ ನಡೆಸಲಾಗುತ್ತಿದೆ ಎಂದು ಭಾರತ ಶುಕ್ರವಾರ ಪ್ರತಿಕ್ರಿಯೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ; ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು
ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ
ಜನನ-ಮರಣ ಪ್ರಮಾಣಪತ್ರಕ್ಕೆ ತಪ್ಪಿಲ್ಲ ಅಲೆದಾಟ
ಹೊರಗುತ್ತಿಗೆ ನೇಮಕಾತಿಗಳಲ್ಲಿ ಶೇ. 33 ಮೀಸಲಾತಿ; ಮಹಿಳೆಯರಿಗೆ ಮೀಸಲು
ನಿರಂತರ ಮಳೆಗೆ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ; ಶೀಘ್ರ ಭರ್ತಿಯಾಗಲಿದೆ ಯಗಚಿ ಜಲಾಶಯ