ಹವಾಮಾನ ಬದಲಾವಣೆ ಶೃಂಗ: ಹೊಸ ಒಪ್ಪಂದವಿಲ್ಲ

Team Udayavani, Dec 16, 2019, 1:20 AM IST

ಮ್ಯಾಡ್ರಿಡ್‌: ಸ್ಪೇನ್‌ ರಾಜಧಾನಿಯಲ್ಲಿ ಎರಡು ವಾರಗಳಿಂದ ನಡೆದ ಹವಾಮಾನ ಬದಲಾವಣೆ ಕುರಿತ ಶೃಂಗವು ಯಾವುದೇ ಒಪ್ಪಂದವಿಲ್ಲದೆ ರವಿವಾರ ಮುಕ್ತಾಯವಾಗಿದೆ. ಹಿಂದೆಂದಿಗಿಂತಲೂ ದೀರ್ಘ‌ಕಾಲದ ಮಾತುಕತೆ ನಡೆದಿದ್ದರೂ, ಒಮ್ಮತದ ಮತ್ತು ದಿಟ್ಟ ನಿರ್ಧಾರ ಕೈಗೊಳ್ಳುವಲ್ಲಿ ಈ ಶೃಂಗ ವಿಫ‌ಲವಾಗಿದೆ.

ಹೆಚ್ಚುತ್ತಿರುವ ಜಾಗತಿಕ ತಾಪಮಾನ ಮತ್ತು ಇತರ ಅಂಶಗಳ ಬಗ್ಗೆ ಸಹಮತ ಏರ್ಪಡುವ ಬಗ್ಗೆ ನಿರೀಕ್ಷೆ ಹೊಂದಲಾಗಿತ್ತು. 25 ವರ್ಷ ಗಳಿಂದ ಈ ಬಗ್ಗೆ ದೀರ್ಘ‌ವಾಗಿ ಚರ್ಚೆ- ಮಾತುಕತೆಗಳು ನಡೆದಿದ್ದರೂ ನಿರೀಕ್ಷಿತ ಫ‌ಲಿತಾಂಶ ಹೊರಬಿದ್ದಿಲ್ಲ.

ವಿಶ್ವದ 200 ಸರಕಾರಿ ಮುಖ್ಯಸ್ಥರು, ವಿಶ್ವದ ಮೇಲೆ ಹಸುರುಮನೆ ಪರಿಣಾಮವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬಡ ರಾಷ್ಟ್ರಗಳಿಗೆ ನೆರವು ನೀಡುವ ಬಗ್ಗೆ ಕರೆ ನೀಡಿ, ಹಾಲಿ ನಿಯಮಗಳನ್ನೇ ಜಾರಿಗೊಳಿಸುವ ನಿಟ್ಟಿನಲ್ಲಿ ಸಹಮತ ಹೊಂದಲು ನಿರ್ಧರಿಸಿದ್ದಾರೆ.

2015ರಲ್ಲಿ ಪ್ಯಾರಿಸ್‌ನಲ್ಲಿ ಸಹಿ ಹಾಕಲಾಗಿರುವ ಒಪ್ಪಂದದ ಪ್ರಕಾರ ತಾಪಮಾನ ಹೆಚ್ಚಾಗಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಹಲವು ದೇಶಗಳಲ್ಲಿ ತಾಪ ಪ್ರಮಾಣ 3-4 ಡಿಗ್ರಿ ಸೆಲ್ಷಿಯಸ್‌ನಷ್ಟು ಹೆಚ್ಚಾಗಿದೆ. ಮುಂದಿನ ಹವಾಮಾನ ಸಮ್ಮೇಳನ ಗ್ಲಾಸ್ಗೋದಲ್ಲಿ ನಡೆಯಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ನಗರದಲ್ಲಿ ಆಸ್ತಿ ಮಾಲೀಕರಿಂದ ಆಸ್ತಿ ತೆರಿಗೆಯೊಂದಿಗೆ ಶೇ.2ರಷ್ಟು ಭೂ ಸಾರಿಗೆ ಉಪ ಕರ (ಸೆಸ್‌) ವಸೂಲಿ ಮಾಡುವ ಬಿಬಿಎಂಪಿ ನಿರ್ಣಯಕ್ಕೆ ಸಾರ್ವಜನಿಕ ವಲಯದಿಂದ...

  • ಬೆಂಗಳೂರು: ನೆರೆ ಸಂತ್ರಸ್ತರು ತ್ವರಿತವಾಗಿ ಎರಡನೇ ಕಂತಿನ ಹಣವನ್ನು ಪಡೆದು ಮನೆಗಳನ್ನು ಮೂರು ತಿಂಗಳಲ್ಲಿ ನಿರ್ಮಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ್‌...

  • ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೆಹಲಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾದ ಚರ್ಚೆ ಗರಿಗೆದರುತ್ತಿದ್ದು, ಸಚಿವಾಕಾಂಕ್ಷಿಗಳಲ್ಲಿ...

  • ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಶೇ.49 ಹುದ್ದೆಗಳನ್ನು ಭರ್ತಿ ಮಾಡಿ ಕೊಳ್ಳುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು...

  • ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ಒಂದು ವಿಭಾಗದಿಂದ ಇನ್ನೊಂದು ವಿಭಾಗಕ್ಕೆ ವರ್ಗಾವಣೆ ಹೊಂದಿರುವ ಶಿಕ್ಷಕರು ಮುಂಬಡ್ತಿಯಿಂದಲೂ ವಂಚಿತರಾಗುತ್ತಿದ್ದಾರೆ. 2006ಕ್ಕಿಂತ...