ಕೊರೊನಾ ವೈರಸ್: ಚೀನಾದಲ್ಲಿ ಬಲಿಯಾದವರ ಸಂಖ್ಯೆ 2,236ಕ್ಕೆ ಏರಿಕೆ
Team Udayavani, Feb 21, 2020, 8:20 AM IST
ಚೀನಾ: ವುಹಾನ್ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು ಈ ಸೋಂಕುವಿಗೆ ತುತ್ತಾಗಿದ್ದು , ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.
ಹುಬೈನ ಆರೋಗ್ಯ ಆಯೋಗ ಮತ್ತೆ 411 ಜನರಿಗೆ ಸೋಂಕು ತಗುಲಿರುವ ಮಾಹಿತಿಯನ್ನು ಖಚಿತಪಡಿಸಿದೆ. ಇತರೆ ದಿನಗಳಿಗೆ ಹೋಲಿಸಿದರೆ ಸಾವಿನ ಪ್ರಮಾಣ ,ಹಾಗೂ ಸೋಂಕು ಪೀಡಿತರ ಪ್ರಮಾಣ ಕಡಿಮೆಯಾಗಿದ್ದು ವೈರಸ್ ನಿಯಂತ್ರಣಕ್ಕೆ ಬರುವ ಸೂಚನೆ ಸಿಕ್ಕಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.
ಮಾತ್ರವಲ್ಲದೆ ವೈರಸ್ ನಿಂದ ಬಳಲುತ್ತಿರುವ ಸಂಖ್ಯೆಯನ್ನು ಸಮರ್ಪಕವಾಗಿ ಆಳೆಯಲು ಈ ಮೊದಲಿನ ವಿಧಾನವನ್ನು ಬಳಸದೆ ಪ್ರಯೋಗಾಲಯ ಪರೀಕ್ಷೆಯಿಂದ ಸೋಂಕು ತಗುಲಿದೆ ಎಂದು ಖಚಿತಗೊಂಡ ಮಾಹಿತಿಯನ್ನು ಮಾತ್ರ ಆರೋಗ್ಯಧಿಕಾರಿಗಳು ನೀಡುತ್ತಿದ್ದಾರೆ.
ಹಾಗಾಗಿ ವೈರಸ್ ನ ಕುರಿತು ನಿಖರ ಮಾಹಿತಿಗಳು ತಲುಪುತ್ತಿವೆ ಎಂದು ಚೀನಾ ಸರ್ಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ