ಅಮೆರಿಕದಲ್ಲಿ ಕೋವಿಡ್ 19 ವೈರಸ್ ಸಾವಿನ ನಾಗಾಲೋಟ: 5ಸಾವಿರ ಮೀರಿದ ಸಾವಿನ ಸಂಖ್ಯೆ!
ಈ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ಜಾಗತಿಕ ಸಮುದಾಯದ ದಾರಿ ತಪ್ಪಿಸುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.
Team Udayavani, Apr 2, 2020, 9:39 AM IST
Representative Image
ವಾಷಿಂಗ್ಟನ್: ಕೋವಿಡ್ 19 ಮಾರಣಾಂತಿಕ ವೈರಸ್ ಅಮೆರಿಕದಲ್ಲಿ ಅಟ್ಟಹಾಸಗೈಯುತ್ತಿದ್ದು, ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 5ಸಾವಿರ ದಾಟಿರುವುದಾಗಿ ಜಾನ್ಸ್ ಹೋಪ್ ಕಿನ್ಸ್ ಯೂನಿರ್ವಸಿಟಿ ತಿಳಿಸಿದೆ.
ಗುರುವಾರ ಮುಂಜಾನೆವರೆಗಿನ ಅಂಕಿ ಅಂಶದ ಪ್ರಕಾರ ಅಮೆರಿಕದಲ್ಲಿ ಕೋವಿಡ್ ಸೋಂಕಿಗೆ 5,116 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೇ ಕಳೆದ 24ಗಂಟೆಗಳಲ್ಲಿ 884 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ವಿವರಿಸಿದೆ.
ಕೋವಿಡ್ 19 ವೈರಸ್ ಗೆ ಸಾವನ್ನಪ್ಪಿರುವ ಸಂಖ್ಯೆಯಲ್ಲಿ ಅಮೆರಿಕ ಇಟಲಿ ಮತ್ತು ಸ್ಪೇನ್ ಗಿಂತ ಕೆಳಗಿದ್ದು, ಚೀನಾಗಿಂತ ಅಧಿಕ ಮಂದಿ ಅಮೆರಿಕದಲ್ಲಿ ಸಾವನ್ನಪ್ಪಿದ್ದಾರೆ. ಚೀನಾ 3,316 ಜನರು ಮಾತ್ರ ಸಾವನ್ನಪ್ಪಿರುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ಜಾಗತಿಕ ಸಮುದಾಯದ ದಾರಿ ತಪ್ಪಿಸುತ್ತಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.
ಅಮೆರಿಕದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 2,15,417ಕ್ಕೆ ಏರಿಕೆಯಾಗಿದೆ. ಈ ಪರಿಸ್ಥಿತಿ ಅಮೆರಿಕದಲ್ಲಿ ಭೀಕರ ಪರಿಸ್ಥಿತಿಯನ್ನು ತಂದೊಡ್ಡಲಿದೆ ಎಂದು ಟ್ರಂಪ್ ಈಗಾಗಲೇ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ