ವಿಶ್ವದಾದ್ಯಂತ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 3,282ಕ್ಕೆ ಏರಿಕೆ: ವಿಶ್ವ ಆರೋಗ್ಯ ಸಂಸ್ಥೆ
Team Udayavani, Mar 6, 2020, 8:50 AM IST
ಮಾಸ್ಕೋ: ಜಗತ್ತಿನಾದ್ಯಂತ ಕೊರೊನಾ ಮಾಹಾಮಾರಿಗೆ ಬಲಿಯಾದವರ ಸಂಖ್ಯೆ 3,282ಕ್ಕೆ ತಲುಪಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 2,241 ಹೊಸ ಸೋಂಕಿತರು ಪತ್ತೆಯಾಗಿದ್ದು 84 ಜನರು ಮೃತಪಟ್ಟಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ.
ಮಾತ್ರವಲ್ಲದೆ ವಿಶ್ವದಾದ್ಯಂತ ಸೋಂಕು ಪೀಡಿತರ ಸಂಖ್ಯೆ 95,333ಕ್ಕೆ ತಲುಪಿದ್ದು ಇದರಲ್ಲಿ 80,565 ಜನರು ಚೀನಾ ಪ್ರಜೆಗಳು ಎಂದು ವಿಶ್ವ ಸಂಸ್ಥೆ ತಿಳಿಸಿದೆ.
2019 ರ ಡಿಸೆಂಬರ್ ನಲ್ಲಿ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಕಂಡುಬಂದಿದ್ದ ಕೋವಿಡ್ 19 ವೈರಸ್ ಇದೀಗ ಜಗತ್ತಿನಾದ್ಯಂತ ವ್ಯಾಪಿಸಿದ್ದು, ಜನವರಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ‘ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು’ ಘೋಷಿಸಿತ್ತು.
ಅಮೆರಿಕಾದಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 12ಕ್ಕೆ ಏರಿದೆ. ಮಾತ್ರವಲ್ಲದೆ 53 ಜನರಿಗೆ ಹೊಸದಾಗಿ ಸೋಂಕು ಇರುವುದು ಧೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ