ಪರಿಸ್ಥಿತಿ ಹದಗೆಡುತ್ತಿದೆ !: ಕೋವಿಡ್-19 ಕುರಿತು ಆತಂಕ ವ್ಯಕ್ತಪಡಿಸಿದ WHO ಮುಖ್ಯಸ್ಥ
Team Udayavani, Jun 9, 2020, 8:01 AM IST
ವಾಷಿಂಗ್ಟನ್: ಯುರೋಪಿನಲ್ಲಿ ಪರಿಸ್ಥಿತಿ ಸುಧಾರಿಸುತ್ತಿದ್ದರೂ ಸಹ, ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಜಾಗತಿಕವಾಗಿ ಪರಿಸ್ಥಿತಿ ಹದಗೆಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ, ವಿಶ್ವಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್, ಯುಎನ್ ಆರೋಗ್ಯ ಸಂಸ್ಥೆ ಭಾನುವಾರ ವರದಿ ಮಾಡಿದ ಶೇ 75% ಪ್ರಕರಣಗಳು ಅಮೆರಿಕ ಮತ್ತು ದಕ್ಷಿಣ ಏಷ್ಯಾದ 10 ದೇಶಗಳಿಂದ ಬಂದವು. ಕಳೆದ 10 ದಿನಗಳಲ್ಲಿ 10,00,00ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿವೆ. ಮಾತ್ರವಲ್ಲದೆ ಭಾನುವಾರ ಒಂದೇ ದಿನ 1,36,000 ಸೋಂಕಿತ ಪ್ರಕರಣಗಳು ಕಂಡುಬಂದಿದ್ದು ಇವರೆಗಿನ ಅತಿದೊಡ್ಡ ಸಂಖ್ಯೆಯಾಗಿದೆ ಎಂದು ತಿಳಿಸಿದರು.
ಆಫ್ರಿಕಾ ಖಂಡದ ಹೆಚ್ಚಿನ ದೇಶಗಳಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ. ಜಾಗತಿಕವಾಗಿ ಹಲವಾರು ರಾಷ್ಟ್ರಗಳು ಕೋವಿಡ್ ನಿಯಂತ್ರಿಸುವಲ್ಲಿ ಸಕರಾತ್ಮಕ ಕ್ರಮ ಕೈಗೊಳ್ಳುತ್ತಿದೆ. ಇದನ್ನು ವಿಶ್ವಸಂಸ್ಥೆ ಅಭಿನಂದಿಸುತ್ತದೆ ಎಂದು ಟೆಡ್ರೋಸ್ ತಿಳಿಸಿದರು.
ಕೋವಿಡ್ 19 ಮಹಾಮಾರಿಗೆ ಜಾಗತಿಕವಾಗಿ 4.3 ಲಕ್ಷ ಜನರು ಬಲಿಯಾಗಿದ್ದು, 7 ಮಿಲಿಯನ್ ಗಿಂತಲೂ ಹೆಚ್ಚು ಜನರು ಸೋಂಕಿಗೆ ತುತ್ತಾಗಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ಚೀನಾದಲ್ಲಿ ಕಂಡುಬಂದಿದ್ದ ಈ ವೈರಸ್ ಗೆ ಇದೀಗ ಆರು ತಿಂಗಳು ಭರ್ತಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…