Hospitalised: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಪ್ರಾಶನ? ಆಸ್ಪತ್ರೆಯಲ್ಲಿ ಚಿಕಿತ್ಸೆ
Team Udayavani, Dec 18, 2023, 9:11 AM IST
ಇಸ್ಲಾಮಾಬಾದ್: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅರೋಗ್ಯ ಸ್ಥಿತಿ ಗಂಭೀರವಾಗಿದ್ದು ಸದ್ಯ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.
ವಿಷಪ್ರಾಶಾನ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಆದರೆ ಈ ಬಗ್ಗೆ ಇನ್ನೂ ದೃಢೀಕರಿಸಲಾಗಿಲ್ಲ. ಕಳೆದ ಎರಡು ದಿನಗಳ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ದಾವೂದ್ ಇಬ್ರಾಹಿಂ ದಾಖಲಾಗಿರುವ ಆಸ್ಪತ್ರೆಗೆ ಬಿಗಿ ಭದ್ರತೆ ಮಾಡಲಾಗಿದ್ದು ಆಸ್ಪತ್ರೆಗೆ ಬೇರೆ ಯಾರಿಗೂ ಪ್ರವೇಶಿಸಲು ಅವಕಾಶ ನಿರಾಕರಣೆ ಮಾಡಲಾಗಿದ್ದು ಕೇವಲ ಆಸ್ಪತ್ರೆಯ ಉನ್ನತ ಅಧಿಕಾರಿಗಳು, ಕುಟುಂಬದ ಸದಸ್ಯರಿಗೆ ಮಾತ್ರ ಭೇಟಿಗೆ ಅವಕಾಶ ನೀಡಲಾಗಿದೆ.
ಭಾರತಕ್ಕೆ ಮೋಸ್ಟ್ ವಾಂಟೆಡ್ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂಗಾಗಿ ಮುಂಬೈ ಪೊಲೀಸರು ಆತನ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ.
ಜನವರಿಯಲ್ಲಿ, ದಾವೂದ್ನ ಸಹೋದರಿ ಹಸೀನಾ ಪಾರ್ಕರ್ನ ಮಗ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಭೂಗತ ಲೋಕದ ಡಾನ್ ಎರಡನೇ ಬಾರಿಗೆ ಮದುವೆಯಾದ ನಂತರ ಕರಾಚಿಯಲ್ಲಿ ಉಳಿದುಕೊಂಡಿದ್ದಾರೆ ಎಂದು ತಿಳಿಸಿದ್ದರು.
ಇದನ್ನೂ ಓದಿ: Boat Tragedy: ಶಿರೂರಿನಲ್ಲಿ ಮೀನುಗಾರಿಕಾ ದೋಣಿ ದುರಂತ… ಇಬ್ಬರು ಮೀನುಗಾರರು ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು