ಲಂಕಾ ಐಸಿಸ್‌ ಅಟ್ಟಹಾಸಕ್ಕೆ ಬಲಿಯಾದವರ ಸಂಖ್ಯೆ 359ಕ್ಕೆ ಏರಿಕೆ

Team Udayavani, Apr 24, 2019, 12:12 PM IST

ಕೊಲಂಬೋ: ಐಸಿಸ್‌ ಉಗ್ರರು ಶ್ರೀಲಂಕಾದಲ್ಲಿ ಈಸ್ಟರ್‌ ರವಿವಾರ  (ಎ. 21)ದಂದು ನಡೆದ ಸರಣಿ ಸ್ಫೋಟದಲ್ಲಿ ಬಲಿಯಾದವರ ಸಂಖ್ಯೆ ಏರಿಕೆಯಾಗುತ್ತಲೆ ಇದ್ದು, ಬುಧವಾರ ಬೆಳಗ್ಗಿನವರೆಗೆ ಸಾವಿನ ಸಂಖ್ಯೆ 359 ಕ್ಕೆ ಏರಿಕೆಯಾಗಿದೆ.

ಪೊಲೀಸ್‌ ವಕ್ತಾರರು ಸಾವಿನ ಸಂಖ್ಯೆ ಹೆಚ್ಚಳವಾಗಿರುವ ಕುರಿತು ವಿವರ ನೀಡಿದ್ದಾರೆ. ದೇಶಾದ್ಯಂತ ದಾಳಿ ನಡೆಸಿದ ಉಗ್ರರಿಗಾಗಿ ವ್ಯಾಪಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈಗಾಗಲೆ 40ಕ್ಕೂ ಹೆಚ್ಚು ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಮೂರು ಚರ್ಚ್‌ಗಳು ಮತ್ತು ಮೂರು ಐಷಾರಾಮಿ ಹೊಟೇಲ್‌ಗ‌ಳ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದರು.

ಅಬು ಉಬೈದಾ, ಅಬು ಅಲ್ ಮುಖ್ತಾರ್, ಅಬು ಖಲೀಲ್, ಅಬು ಹಮ್ಜಾ, ಅಬು ಅಲ್ ಬರ್ರಾ, ಅಬು ಮುಹಮ್ಮದ್ ಮತ್ತು ಅಬು ಅಬ್ದುಲ್ಲಾ ದಾಳಿ ನಡೆಸಿದ ಉಗ್ರರು ಎಂದು ಗುರುತಿಸಲಾಗಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಂಗಳೂರು: ನಿರ್ಮಾಣ್‌ ಹೋಮ್ಸ್‌ ಹಾಗೂ ಕೋಸ್ಟಲ್‌ ಕರ್ನಾಟಕ ಡೆವಲಪರ್ ಸಂಸ್ಥೆಯ ಸಹಯೋಗದಲ್ಲಿ ಬಿಜೈ ಕಾಪಿಕಾಡ್‌ನ‌ಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ 67...

  • ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ ಸ್ನಾತಕೋತ್ತರ ಕೇಂದ್ರ ಹಾಗೂ ಚಿಕ್ಕಬಳ್ಳಾಪುರದ ಸರ್ಕಾರಿ ಶಿಕ್ಷಣ ಕಾಲೇಜಿನಲ್ಲಿರುವ ಸ್ನಾತಕೋತ್ತರ...

  • ಮಲ್ಪೆ: ಭಗವಂತ ಭಕ್ತರಿಗೆ ಬೇರೆ ಬೇರೆ ರೂಪದಿಂದ ಅನುಗ್ರಹ ಮಾಡುತ್ತಾನೆ. ಆದರಲ್ಲೂ ಕಲಿಯುಗದ ಜನರ ಸಾಧನೆ, ಸಿದ್ಧಿಗೆ ತೊಂದರೆ ಇದ್ದಲ್ಲಿ ಅದನ್ನು ಪರಿಪಾಲನೆ ಮಾಡಲು...

  • ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ನಿಚ್ಚಳ ಬಹುಮತವನ್ನು ಒದಗಿಸಿಕೊಟ್ಟ 2019ನೇ ಲೋಕಸಭೆ ಚುನಾವಣೆ ಈ ಕಾರಣಕ್ಕೆ ಮಾತ್ರ ಮುಖ್ಯವಾಗಿಲ್ಲ, ದೇಶದ ರಾಜಕೀಯ...

  • 2014ರಲ್ಲಿ ಅಮೇಠಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಡಾ.ಕುಮಾರ್‌ ವಿಶ್ವಾಸ್‌, ಈಗ ತಮ್ಮ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ....

  • ಕಾಸರಗೋಡು: ಕೇರಳದಲ್ಲಿ ಈ ಬಾರಿಯಾದರೂ ಖಾತೆ ತೆರೆಯುವ ಬಗ್ಗೆ ಬಹಳಷ್ಟು ನಿರೀಕ್ಷೆಯಿರಿಸಿದ್ದ ಬಿಜೆಪಿಗೆ ಈ ಗುರಿ ಸಾಧಿಸಲು ಸಾಧ್ಯವಾಗದಿದ್ದರೂ, ಈ ಹಿಂದಿನ ಎಲ್ಲ...