ಅಮೆರಿಕ ಚುನಾವಣೆ: ಸೆನೆಟ್ನಲ್ಲಿ ಡೆಮಾಕ್ರಾಟಿಕ್ ಪಕ್ಷಕ್ಕೆ ಹಿಡಿತ
ಅರಿಜೋನಾ, ನೆವಾಡಾ ಜಾರ್ಜಿಯಾದಲ್ಲಿ ಗೆದ್ದ ಆಡಳಿತ ಪಕ್ಷ; ಇಂದು ಪೂರ್ಣ ಪ್ರಮಾಣದ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ
Team Udayavani, Nov 15, 2022, 7:10 AM IST
ವಾಷಿಂಗ್ಟನ್: ಅಮೆರಿಕ ಸಂಸತ್ನ ಮೇಲ್ಮನೆ ಸೆನೆಟ್ನಲ್ಲಿ ಆಡಳಿತಾರೂಡ ಡೆಮಾಕ್ರಾಟಿಕ್ ಪಾರ್ಟಿ ಹಿಡಿತ ಸಾಧಿಸಿದೆ. ಪ್ರಕಟವಾದ ಫಲಿತಾಂಶಗಳ ಪೈಕಿ 50 ಸ್ಥಾನಗಳನ್ನು ಪಡೆದುಕೊಂಡಿದೆ. ನಿರ್ಣಾಯಕವಾಗಿರುವ ಅರಿಜೋನಾ, ನೆವಾಡಾ, ಜಾರ್ಜಿಯಾದಲ್ಲಿನ ಮತ ಎಣಿಕೆ ಪೂರ್ತಿಯಾದ ಬಳಿಕ ಅಧ್ಯಕ್ಷ ಜೋ ಬೈಡೆನ್ ನೇತೃತ್ವದ ಆಡಳಿತ ಪಕ್ಷಕ್ಕೆ 50 ಸ್ಥಾನಗಳು ಪ್ರಾಪ್ತವಾಗಿವೆ. ಆದರೆ ಸಂಸತ್ನ ಕೆಳಮನೆ ಹೌಸ್ ಆಫ್ ರೆಪ್ರಸೆಂಟೇಟಿವ್ಸ್ನಲ್ಲಿ ಇನ್ನೂ ಬಹುಮತ ಯಾರಿಗೂ ಪ್ರಾಪ್ತವಾಗಿಲ್ಲ. ನ.15ರಂದು ಕೆಳಮನೆಯ ಪೂರ್ಣ ಪ್ರಮಾಣದ ಫಲಿತಾಂಶ ಲಭ್ಯವಾಗಲಿದೆ.
ಇಂದು ಟ್ರಂಪ್ ಘೋಷಣೆ?: ಅಮೆರಿಕ ಸಂಸತ್ನ ಮಧ್ಯಂತರ ಚುನಾವಣೆ ಫಲಿತಾಂಶ ರಿಪಬ್ಲಿಕನ್ ಪಾರ್ಟಿಯಲ್ಲಿ ಭಿನ್ನಮತದ ಗೆರೆಯನ್ನು ಮೂಡಿಸಿದೆ ಎಂದು ಹೇಳಲಾಗುತ್ತಿದೆ. ಅವರ ಪ್ರಚಾರ ವೈಖರಿ ಮತ್ತು ನಿರೀಕ್ಷಿತ ಫಲಿತಾಂಶ ಬಾರದೇ ಇರುವ ಹಿನ್ನೆಲೆಯಲ್ಲಿ ಫ್ಲಾರಿಡಾದ ಗವರ್ನರ್ ರಾನ್ ಡೆ ಸೈಂಟ್ಸ್ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಂದು ಬಿಂಬಿಸುವ ಪ್ರಯತ್ನಗಳು ನಡೆದಿವೆ ಎಂದು ಹೇಳಲಾಗಿದೆ. ಅದಕ್ಕೆಲ್ಲ ಪೂರಕವಾಗಿ ಮಂಗಳವಾರ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2024ರ ಅಧ್ಯಕ್ಷೀಯ ಅಭ್ಯರ್ಥಿಯಾಗುವ ಬಗ್ಗೆ ಪತ್ರಿಕಾ ಗೋಷ್ಠಿಯಲ್ಲಿ ಘೋಷಣೆ ಮಾಡಲಿದ್ದಾರೆ ಎಂದು ಅವರ ಆಪ್ತ ವಲಯ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ