ಉತ್ತರ ಕೊರಿಯಾ ಜತೆ ಯುದ್ಧಕ್ಕೆ ಭರ್ಜರಿ ಸಿದ್ಧತೆ; ಟ್ರಂಪ್ ಘೋಷಣೆ
Team Udayavani, Oct 23, 2017, 12:43 PM IST
ವಾಷಿಂಗ್ಟನ್: ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಅಮೆರಿಕದ ಜತೆ ಯುದ್ಧ ನಡೆಸಲು ಮುನ್ನುಗ್ಗುತ್ತಿರುವ ನಡುವೆಯೇ, ಉತ್ತರ ಕೊರಿಯಾ ಜತೆ ಯುದ್ಧಕ್ಕೆ ಅಮೆರಿಕ ಸರ್ವ ರೀತಿಯಲ್ಲೂ ಸಿದ್ಧತೆ ನಡೆಸುತ್ತಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ನಾವು ಯುದ್ಧದ ಸಿದ್ಧತೆಯಲ್ಲಿದ್ದೇವೆ, ನಮ್ಮ ಯುದ್ಧ ಸಿದ್ಧತೆ ಹೇಗಿದೆ ಎಂಬುದು ನಿಮಗೆ ಊಹಿಸಲು ಸಾಧ್ಯವಿಲ್ಲ ಎಂದು ಭಾನುವಾರ ಫೋಕ್ಸ್ ನ್ಯೂಸ್ ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಉತ್ತರ ಕೊರಿಯಾ ಜತೆಗಿನ ಜಿದ್ದಾಜಿದ್ದಿ ಕುರಿತು ಕೇಳಿದ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ್ದಾರೆ. ಯುದ್ಧ ನಡೆಯುತ್ತದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ನಾವು ಸಂಪೂರ್ಣವಾಗಿ ಯುದ್ಧ ಸಿದ್ಧತೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.
ಹಾಗಾದರೆ ನಿಜಕ್ಕೂ ಯುದ್ಧ ನಡೆಯುವುದು ಖಚಿತವೇ ಎಂಬ ಪ್ರಶ್ನೆಗೆ ಯಾರಿಗೆ ಗೊತ್ತು ಎಂದು ಟ್ರಂಪ್ ಮಾರ್ಮಿಕವಾಗಿ ಉತ್ತರಿಸುವ ಮೂಲಕ ಉತ್ತರ ಕೊರಿಯಾ ವಿರುದ್ಧ ಸಮರದ ಬಗ್ಗೆ ಪರೋಕ್ಷವಾಗಿ ಮುನ್ಸೂಚನೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ