ಕೋವಿಡ್ ಸೋಂಕು: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಐಸಿಯು ನಲ್ಲಿ ಚಿಕಿತ್ಸೆ
Team Udayavani, Oct 4, 2020, 8:32 AM IST
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಸದ್ಯ ಡೊನಾಲ್ಡ್ ಟ್ರಂಪ್ ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟ್ರಂಪ್ ಗೆ ಕೋವಿಡ್ ಸೋಂಕು ತಾಗಿರುವುದು ಶನಿವಾರ ದೃಢವಾಗಿತ್ತು. ಅವರನ್ನು ಹೆಲಿಕಾಪ್ಟರ್ ಮೂಲಕ ವಾಲ್ಟರ್ ರೀಡ್ ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಡೊನಾಲ್ಡ್ ಟ್ರಂಪ್ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಟ್ರಂಪ್ ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರು ಅಪಾಯದಿಂದ ಸಂಪೂರ್ಣ ಹೊರಬಂದಿಲ್ಲವಾದರೂ, ಅವರ ಆರೋಗ್ಯದ ಬಗ್ಗೆ ನಾವು ಆಶಾವಾದಿಯಾಗಿದ್ದೇವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ:ವಂದೇ ಭಾರತ್ ಮಿಷನ್ 1.17 ಲಕ್ಷ ಪ್ರಯಾಣಿಕರು ವಿದೇಶಗಳಿಂದ ಮುಂಬಯಿಗೆ ಆಗಮನ
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹಿರಿಯ ಸಲಹೆಗಾರ ಹೋಪ್ ಹಿಕ್ಸ್ ಅವರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಪರೀಕ್ಷೆಗೆ ಒಳಗಾಗಿದ್ದರು
ನಿರಂತರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಉನ್ನತ ಸಲಹೆಗಾರ ಹಿಕ್ಸ್ ಬಿಡುವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದರು. ಹಿಕ್ಸ್ ಟ್ರಂಪ್ ಜತೆಗೆ ಇದ್ದಿದ್ದರಿಂದ ಸೋಂಕು ಹರಡಿದೆ. ಇದರಿಂದಾಗಿ ಅಧ್ಯಕ್ಷೀಯ ಚುನಾವಣಾ ಪ್ರಚಾರದ ಅಂತಿಮ ಹಂತದಲ್ಲಿ ಕೋವಿಡ್ ತಗುಲಿರುವುದು, ಟ್ರಂಪ್ ಪ್ರಚಾರಕ್ಕೆ ಹಿನ್ನಡೆಯಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ