ಡೊನಾಲ್ಡ್‌ ಟ್ರಂಪ್‌ ತಪ್ಪಿತಸ್ಥ; ಈ ಸ್ಥಿತಿ ಎದುರಿಸಿದ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ

ದಾಖಲೆಗಳ ದುರುಪಯೋಗ ಪ್ರಕರಣದಲ್ಲಿ ಅಮೆರಿಕದ ಕಾನೂನು ಸಚಿವಾಲಯ ಆರೋಪ

Team Udayavani, Jun 10, 2023, 9:00 AM IST

ಡೊನಾಲ್ಡ್‌ ಟ್ರಂಪ್‌ ತಪ್ಪಿತಸ್ಥ; ಈ ಸ್ಥಿತಿ ಎದುರಿಸಿದ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ

ಮಿಯಾಮಿ/ವಾಷಿಂಗ್ಟನ್‌:ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ತಪ್ಪಿತಸ್ಥ ಎಂದು ಘೋಷಿಸಲಾಗಿದೆ. ಈ ಬಗ್ಗೆ ಖುದ್ದು ಡೊನಾಲ್ಡ್‌ ಟ್ರಂಪ್‌ ಅವರೇ ತನ್ನದೇ ಮಾಲಿಕತ್ವದ ಸಾಮಾಜಿಕ ಜಾಲತಾಣ “ಟ್ರಾತ್‌ ಸೋಶಿಯಲ್‌’ ನಲ್ಲಿ ಬರೆದುಕೊಂಡಿದ್ದಾರೆ. ಮುಂದಿನ ಮಂಗಳವಾರ (ಜೂ.13) ಫ್ಲೋರಿಡಾದ ಮಿಯಾಮಿಯಲ್ಲಿ ಇರುವ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿದೆ. ಇಂಥ ಬೆಳವಣಿಗೆ ಉಂಟಾಗಲಿದೆ ಎಂಬ ಊಹೆಯೂ ಇರಲಿಲ್ಲ. ಭ್ರಷ್ಟ ಬೈಡೆನ್‌ ಸರ್ಕಾರದಲ್ಲಿ ಎಲ್ಲವೂ ಸಾಧ್ಯವಾಗಿದೆ’ ಎಂದು ಟೀಕಿಸಿದ್ದಾರೆ.

2020ರಲ್ಲಿ ಅಧಿಕಾರದ ಅವಧಿ ಮುಕ್ತಾಯವಾದ ಬಳಿಕವೂ ಕೂಡ ಸರ್ಕಾರದ ಪರಮ ರಹಸ್ಯ ದಾಖಲೆಗಳನ್ನು ನಿಯಮ ಮೀರಿ ತನ್ನ ಬಳಿ ಇರಿಸಿಕೊಂಡ ಆರೋಪದಡಿಯಲ್ಲಿ ಟ್ರಂಪ್‌ ವಿರುದ್ಧ ಕೇಸು ದಾಖಲಾಗಿತ್ತು. ಗುರುತರ ಆರೋಪಗಳನ್ನು ಎದುರಿಸಿ ತಪ್ಪಿತಸ್ಥ ಎಂಬ ಆರೋಪಕ್ಕೆ ಗುರಿಯಾದ ಅಮೆರಿಕದ ಮೊದಲ ಅಧ್ಯಕ್ಷ ಎಂಬ ಕುಖ್ಯಾತಿಗೆ ಕೂಡ ಟ್ರಂಪ್‌ ಪಾತ್ರರಾಗಿದ್ದಾರೆ.

ಟ್ರಂಪ್‌ ವಿರುದ್ಧ ಪ್ರಮುಖ ಸರ್ಕಾರಿ ದಾಖಲೆಗಳ ಅಸಮರ್ಪಕ ನಿರ್ವಹಣೆ, ತನಿಖಾ ಸಂಸ್ಥೆಗಳಿಗೆ ಕರ್ತವ್ಯ ನಿರ್ವಹಣೆಯಲ್ಲಿ ಅಡ್ಡಿ ಸೇರಿದಂತೆ ಒಟ್ಟು ಏಳು ಆರೋಪಗಳನ್ನು ಹೊರಿಸಲಾಗಿದೆ ಎಂದು ಅವರ ಪರ ವಕೀಲರು ತಿಳಿಸಿದ್ದಾರೆ.

ಅಮೆರಿಕದ ಇತಿಹಾಸದಲ್ಲಿಯೇ ಇದೊಂದು ಕರಾಳ ದಿನ ಎಂದು ದೂರಿರುವ ಟ್ರಂಪ್‌, ಮಂಗಳವಾರ ತಮ್ಮನ್ನು ಬಂಧಿಸುವ ಸಾಧ್ಯತೆ ಇದೆ ಎಂದೂ ಹೇಳಿಕೊಂಡಿದ್ದಾರೆ. ಮುಂದಿನ ವಾರ ಮಿಯಾಮಿ ಕೋರ್ಟ್‌ನಲ್ಲಿ ಟ್ರಂಪ್‌ ಹಾಜರಾಗಲಿರುವ ಹಿನ್ನೆಲೆಯಲ್ಲಿ ಅಮೆರಿಕದ ಗುಪ್ತಚರ ಸಂಸ್ಥೆಗಳ ಮುಖ್ಯಸ್ಥ ಮಾಜಿ ಅಧ್ಯಕ್ಷರ ಆಪ್ತ ವಲಯವನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಚುನಾವಣೆಗೆ ಸ್ಪರ್ಧಿಸಲು ಸಾಧ್ಯ:
ಸದರಿ ಪ್ರಕರಣದಲ್ಲಿ ಡೊನಾಲ್ಡ್‌ ಟ್ರಂಪ್‌ ಅವರ ವಿರುದ್ಧ ಹೊರಿಸಲಾಗಿರುವ ಆರೋಪಗಳು ಸಾಬೀತಾಗಿ ಕಾರಾಗೃಹವಾಸ ಶಿಕ್ಷೆ ಅನುಭವಿಸುವಂತಾದರೂ 2024ರಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶ ಸಿಗುತ್ತದೆ. ಒಂದು ವೇಳೆ ಶಿಕ್ಷೆ ಅನುಭವಿಸುತ್ತಿದ್ದರೂ, ಗೆಲುವು ಸಾಧಿಸಿದರೆ ಸಂವಿಧಾನಾತ್ಮಕವಾಗಿ ಅಧಿಕಾರ ನಡೆಸಲು ಸಾಧ್ಯವಾಗುತ್ತದೆ ಎಂದು ಹಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಳೆದ ವರ್ಷ ಅಮೆರಿಕದ ತನಿಖಾ ಸಂಸ್ಥೆ ಎಫ್ಬಿಐ ಫ್ಲೋರಿಡಾದಲ್ಲಿ ಇರುವ ಟ್ರಂಪ್‌ ರೆಸಾರ್ಟ್‌ಗೆ ದಾಳಿ ನಡೆಸಿದ್ದ ಸಂದರ್ಭದಲ್ಲಿ 11 ಸಾವಿರ ಪುಟಗಳಷ್ಟು ಸರ್ಕಾರದ ದಾಖಲೆಗಳು ಇದ್ದಿರುವುದನ್ನು ವಶಪಡಿಸಿಕೊಂಡಿತ್ತು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.