ಡೊನಾಲ್ಡ್ ಟ್ರಂಪ್ ಪುತ್ರನಿಗೆ ಕೋವಿಡ್ ಪಾಸಿಟಿವ್: ಕ್ಯಾಬಿನ್ ನಲ್ಲೇ ಕ್ವಾರಂಟೈನ್
Team Udayavani, Nov 21, 2020, 8:54 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರ ಡೊನಾಲ್ಡ್ ಟ್ರಂಪ್ ಜೂನಿಯರ್ ಗೆ ಕೋವಿಡ್ 19 ಸೋಂಕು ದೃಢವಾಗಿದೆ. ಯಾವುದೇ ರೋಗ ಲಕ್ಷಣ ಇಲ್ಲದ ಕಾರಣ ಅವರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಈ ವಾರದ ಆರಂಭದಲ್ಲೇ ಅವರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಅಂದಿನಿಂದ ಅವರು ತಮ್ಮ ಕ್ಯಾಬಿನ್ ನಲ್ಲೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ಪುತ್ರ ಡೊನಾಲ್ಡ್ ಟ್ರಂಪ್ ಜೂನಿಯರ್ ರ ವಕ್ತಾರ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಏಳು ವರ್ಷ ಹೋರಾಡಿದರೂ ಅಮ್ಮ , ಮಗನಿಗೆ ಸಿಗಲಿಲ್ಲ ಆಧಾರ್ ಕಾರ್ಡ್!
ಈ ಹಿಂದೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮೆಲಿನಿಯಾ ಟ್ರಂಪ್, ಟ್ರಂಪ್ ಕಿರಿಯ ಮಗ ಬ್ಯಾರೊನ್ ಕೂಡಾ ಕೋವಿಡ್ ಸೋಂಕು ಪಾಸಿಟಿವ್ ಆಗಿತ್ತು. ಡೊನಾಲ್ಡ್ ಜೂನಿಯರ್ ರ ಗೆಳತಿ ಕಿಂಬರ್ಲಿ ಗಿಲ್ಫಾಯ್ಲ್ ಕೂಡಾ ಕಳೆದ ಜುಲೈ ನಲ್ಲಿ ಸೋಂಕಿಗೆ ಒಳಗಾಗಿದ್ದರು.
ತಂದೆಯ ಅನುಯಾಯಿಯಾಗಿರುವ ಪುತ್ರ ಅಧ್ಯಕ್ಷೀಯ ಚುನಾವಣೆಯ ಸೋಲನ್ನು ಇನ್ನೂ ನಿರಾಕರಿಸುತ್ತಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444