ನೀತಿ ಸಂಹಿತೆ ಉಲ್ಲಂಘನೆ: ಇಮ್ರಾನ್ ಖಾನ್ ಮತ ಅಸಿಂಧು ಸಾಧ್ಯತೆ
Team Udayavani, Jul 25, 2018, 6:58 PM IST
ಇಸ್ಲಾಮಾಬಾದ್ : ಪಾಕ್ ಸಂಸತ್ತಿಗೆ ಇಸ್ಲಾಮಾಬಾದ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪಾಕಿಸ್ಥಾನ್ ತೆಹರೀಕ್ ಎ ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರು ಮಾಧ್ಯಮ ಮತ್ತು ಕ್ಯಾಮೆರಾಗಳಿಗೆ ಸ್ಪಷ್ಟವಾಗಿ ಕಾಣುವ ರೀತಿಯಲ್ಲಿ ಮತ ಚಲಾಯಿಸುವ ಮೂಲಕ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಗೈದಿದ್ದು ಆ ಕಾರಣಕ್ಕೆ ಚುನಾವಣಾ ಆಯೋಗ ಇಮ್ರಾನ್ ಖಾನ್ ಚಲಾಯಿಸಿರುವ ಮತವನ್ನು ಅಸಿಂಧು ಗೊಳಿಸುವ ಸಾಧ್ಯತೆ ಇದೆ.
ಮತ ಹಾಕಿದ ಬಳಿಕ ಮಾಧ್ಯಮದೊಂದಿಗೆ ಮುಕ್ತ ಸಂವಾದ ನಡೆಸಿರುವ ಕಾರಣಕ್ಕೆ ಪಿಎಂಎಲ್‌ಎನ್ ಅಧ್ಯಕ್ಷ ಶಹಬಾಜ್ ಶರೀಫ್ ಮತ್ತು ಮಾಜಿ ವಿದೇಶ ಸಚಿವ ಖ್ವಾಜಾ ಆಸಿಫ್ ಅವರ ವಿರುದ್ಧ ಚುನಾವಣಾ ಆಯೋಗ, ನೀತಿ ಸಂಹಿತೆಯ ಉಲ್ಲಂಘನೆಗಾಗಿ, ಕಠಿನ ಶಿಸ್ತು ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಕ್ಯಾಮೆರಾ ಮುಂದೆ ಮತ ಹಾಕಿದವರು ಮತ್ತು ಮತದಾನದ ಬಳಿಕ ಮಾಧ್ಯಮದ ಮುಂದೆ ಭಾಷಣ ಮಾಡಿದವರ ನಡೆ-ನುಡಿ ಮೇಲೆ ಕಣ್ಣಿಡಲಾಗಿದೆ; ತಪ್ಪುಗಾರರೆಂದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಚುನಾವಣಾ ಆಯೋಗದ ವಕ್ತಾರ ನದೀಂ ಕಾಸಿಂ ಹೇಳಿರುವುದನ್ನು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!