ಡೊನಾಲ್ಡ್ ಟ್ರಂಪ್ ಖಾತೆಯನ್ನು ಎರಡು ವರ್ಷ ಅಮಾನತು ಮಾಡಿದ ಫೇಸ್ ಬುಕ್
Team Udayavani, Jun 5, 2021, 7:47 AM IST
ವಾಷಿಂಗ್ಟನ್ ಡಿಸಿ: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಧಿಕೃತ ಖಾತೆಯನ್ನು ಫೇಸ್ ಬುಕ್ ಎರಡು ವರ್ಷಗಳ ಕಾಲ ಅಮಾನತು ಮಾಡಿದೆ. 2023ರ ಜನವರಿಯ ವರೆಗೆ ಟ್ರಂಪ್ ಫೇಸ್ ಬುಕ್ ಖಾತೆ ಅಮಾನತಾಗಿದೆ.
ಜನವರಿ 6ರಂದು ಅಮೆರಿಕದ ಕ್ಯಾಪಿಟೊಲ್ ನಲ್ಲಿ ನಡೆದ ಹಿಂಸಾಚಾರಕ್ಕೆ ಟ್ರಂಪ್ ಮಾಡಿದ ಕೆಲವು ಪೋಸ್ಟ್ ಗಳು ಕಾರಣ ಎಂದು ಈ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿದ್ದ ಫೇಸ್ ಬುಕ್ ನ ಸ್ವತಂತ್ರ ಮೇಲ್ವಿಚಾರಣಾ ಸಮಿತಿಯೂ ಈ ನಿರ್ಧಾರವನ್ನು ಎತ್ತಿ ಹಿಡಿದಿದೆ.
ಇದನ್ನೂ ಓದಿ:ರವಿವಾರವೂ ಬ್ಯಾಂಕ್ ಖಾತೆಗೆ ಹಣ ಜಮೆ : ಆ. 1ರಿಂದ ಹಣಕಾಸು ವರ್ಗಾವಣೆಯಲ್ಲಿ ಹೊಸ ವ್ಯವಸ್ಥೆ
ಟ್ರಂಪ್ ಅವರ ಅಮಾನತು ಜನವರಿಯಲ್ಲಿ ಆರಂಭಿಕ ದಿನಾಂಕದಿಂದ ಪರಿಣಾಮಕಾರಿಯಾಗಿದೆ. ಷರತ್ತುಗಳು ಅನುಮತಿಸಿದರೆ ಮಾತ್ರ ಅದನ್ನು ಪುನಃ ಸ್ಥಾಪಿಸಲಾಗುವುದು ಎಂದು ಫೇಸ್ ಬುಕ್ ಬ್ಲಾಗ್ ಪೋಸ್ಟ್ ನಲ್ಲಿ ತಿಳಿಸಿದೆ.
ರಾಜಕೀಯ ನಾಯಕರ ದ್ವೇಷಪೂರಿತ ಪೋಸ್ಟ್ ಗಳಿಗೆ ಕಡಿವಾಣ ಹಾಕುವಲ್ಲಿ ಫೇಸ್ ಬುಕ್ ನ ಈ ನಡೆ ಮಹತ್ವದ್ದು ಎನ್ನಲಾಗಿದೆ. ಟ್ವಿಟ್ಟರ್ ಕೂಡಾ ಈ ಹಿಂದೆ ಇದೇ ರೀತಿಯ ಕ್ರಮ ಕೈಗೊಂಡಿದ್ದು, ಟ್ರಂಪ್ ಖಾತೆಯನ್ನು ಶಾಶ್ವತವಾಗಿ ರದ್ದು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ