ಆರ್ಥಿಕ ಕುಸಿತಕ್ಕೆ ಹೆದರಿ ಜರ್ಮನಿಯ ಹೆಸ್ಸೆ ರಾಜ್ಯದ ವಿತ್ತ ಸಚಿವ ಆತ್ಮಹತ್ಯೆ!

Team Udayavani, Mar 29, 2020, 9:47 PM IST

ಆರ್ಥಿಕ ಕುಸಿತಕ್ಕೆ ಹೆದರಿ ಜರ್ಮನಿಯ ಹೆಸ್ಸೆ ರಾಜ್ಯದ ವಿತ್ತ ಸಚಿವ ಆತ್ಮಹತ್ಯೆ!

ಫ್ರಾಂಕ್‌ಫರ್ಟ್: ಒಂದೆಡೆ ಕೋವಿಡ್ 19 ವೈರಸ್ ಮಹಾಮಾರಿ ಸೋಂಕಿತರನ್ನು ಆಪೋಶನ ತೆಗೆದುಕೊಳ್ಳುತ್ತಿದ್ದರೆ, ಇನ್ನೊಂದೆಡೆ ಕೋವಿಡ್ 19 ವಿಶ್ವಾದ್ಯಂತ ಉಂಟುಮಾಡಿರುವ ತಲ್ಲಣ ಬೇರೆಯದ್ದೇ ರೀತಿಯದ್ದಾಗಿದೆ. ಎಲ್ಲಾ ರಾಷ್ಟ್ರಗಳ ಆರ್ಥಿಕತೆ ನೆಲಕಚ್ಚಿದೆ. ಜನರು ನಿರಿದ್ಯೋಗಿಗಳಾಗಿದ್ದಾರೆ. ಉತ್ಪಾದನೆ ಹಳ್ಳಹಿಡಿದಿದೆ.

ಇತ್ತ ಕೋವಿಡ್ 19 ವೈರಸ್ ಕೊಟ್ಟಿರುವ ಹೊಡೆತಕ್ಕೆ ಕಂಗೆಟ್ಟಿರುವ ಜರ್ಮನಿಯ ಕಥೆಯೂ ಬೇರೆಯಾಗಿಲ್ಲ. ಇಲ್ಲಿನ ಹೆಸ್ಸೆ ಪ್ರಾಂತ್ಯದ ಹಣಕಾಸು ರಾಜ್ಯ ಸಚಿವ ಥಾಮಸ್ ಶೆಫರ್ ಅವರು ಈ ವೈರಸ್ ತಂದೊಡ್ಡಿರುವ ಆರ್ಥಿಕ ಕುಸಿತವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೋಂಕು ವಿಶ್ವದಾದ್ಯಂತ ಹರಡುತ್ತಿದ್ದು, ಅದನ್ನು ತಡೆಯಲು ಜಗತ್ತಿನ ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಘೋಷಿಸಿಕೊಂಡಿವೆ. ಜರ್ಮನಿಯಲ್ಲೂ ಲಾಕ್ ಡೌನ್ ಜಾರಿಯಲ್ಲಿದ್ದು, ದೇಶದ ವಿತ್ತೀಯ ಬೇಳವಣಿಗೆಗೆ ಇದು ಅಪಾಯಕಾರಿಯಾಗಿ ಪರಿಣಮಿಸಿದೆ. ಇದನ್ನು ಪರಿಹರಿಸುವ ಮಾರ್ಗ ಕಾಣದೇ ಥಾಮಸ್ ಅವರು ನೊಂದು ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಪ್ರಾಥಮಿಕ ಮಾಹಿತಿ ಇದೀಗ ಲಭ್ಯವಾಗಿದೆ.

ಈ ದುಃಖಕರ ವಿಷಯವನ್ನು ಪ್ರಧಾನಿ ವೋಲ್ಕರ್ ಬೌಫಿಯರ್ ತಿಳಿಸಿದ್ದಾರೆ. ’54 ವರ್ಷದ ಥಾಮಸ್ ಶೆಫರ್ ರೈಲ್ವೆ ಹಳಿ ಬಳಿ ಶನಿವಾರ ಶವವಾಗಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ವೈಸ್ಬಾಡೆನ್ ಪ್ರಾಸಿಕ್ಯೂಷನ್ ಹೇಳಿದೆ.

10 ವರ್ಷಗಳ ಕಾಲ ಹಣಕಾಸು ಮುಖ್ಯಸ್ಥರಾಗಿದ್ದ ಥಾಮಸ್ ಶೆಫರ್, ಸಾಂಕ್ರಾಮಿಕ ರೋಗದ ಆರ್ಥಿಕ ಪರಿಣಾಮವನ್ನು ಎದುರಿಸಲು ಕಂಪನಿಗಳು ಮತ್ತು ಕಾರ್ಮಿಕರಿಗೆ ಸಹಾಯ ಮಾಡಲು ಹಗಲು ರಾತ್ರಿ ಕೆಲಸ ಮಾಡುತ್ತಿದ್ದರು. ದೇಶದ ಭವಿಷ್ಯದ ಕುರಿತು ಅವರು ತೀವ್ರವಾಗಿ ಚಿಂತಿತರಾಗಿದ್ದರು. ಈ ಕಷ್ಟದ ಸಮಯದಲ್ಲಿ ನಮಗೆ ಅವರಂತಹ ಒಳ್ಳೆಯ ವಿತ್ತ ಸಚಿವರ ಅವಶ್ಯಕತೆ ಇತ್ತು ಎಂದು ಪ್ರಧಾನಿ ಬೌಫಿಯರ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.  ಹೆಸ್ಸೆಯ ಪ್ರಧಾನಿ ಬೌಫಿಯರ್ ಅವರ ಉತ್ತರಾಧಿಕಾರಿಯಾಗಿ ಥಾಮಸ್ ಶೆಫರ್ ಅವರು ನೇಮಕಗೊಳ್ಳುವುದು ಬಹುತೇಕ ಖಚಿತವಾಗಿತ್ತು.

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.