ಟರ್ಕಿಯಲ್ಲಿ ಸಪ್ತಪದಿ ತುಳಿದ ಸಂಸದೆ ನುಸ್ರತ್; ಪ್ರಮಾಣವಚನ ಸ್ವೀಕಾರಕ್ಕೆ ಗೈರು

Team Udayavani, Jun 20, 2019, 10:13 AM IST

ನವದೆಹಲಿ:ಬಂಗಾಳಿ ಚೆಲುವೆ, ನಟಿ, ಮೊದಲ ಬಾರಿಗೆ ಸಂಸತ್ ಸದಸ್ಯೆಯಾಗಿ ಆಯ್ಕೆಯಾಗಿದ್ದ ನುಸ್ರತ್ ಜಹಾನ್ ಉದ್ಯಮಿ ನಿಖಿಲ್ ಜೈನ್ ಜೊತೆ ಬುಧವಾರ ಟರ್ಕಿಯಲ್ಲಿ ಸಪ್ತಪದಿ ತುಳಿದಿದ್ದಾರೆ. ತಮ್ಮ ವಿವಾಹದ ಬಗ್ಗೆ ಗುರುವಾರ ಬೆಳಗ್ಗೆ ನುಸ್ರತ್ ಟ್ವೀಟ್ ಮಾಡುವ ಮೂಲಕ ಬಹಿರಂಗಪಡಿಸಿದ್ದಾರೆ. ಅಂದಹಾಗೆ ನುಸ್ರತ್ ಮದುವೆ ಹಿನ್ನೆಲೆಯಲ್ಲಿ ಸಂಸತ್ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಲು ಗೈರುಹಾಜರಾಗಿದ್ದಾರೆ!

ಟ್ವೀಟರ್ ಖಾತೆಯಲ್ಲಿ ಮದುವೆ ಫೋಟೋಗಳನ್ನು ಶೇರ್ ಮಾಡಿರುವ ನುಸ್ರತ್, ನಿಖಿಲ್ ಜೈನ್ ಜೊತೆಗಿನ ವಿವಾಹ ತುಂಬಾ ಖುಷಿಕೊಟ್ಟಿದೆ ಎಂದು ಬರೆದುಕೊಂಡಿದ್ದಾರೆ.

ಆಪ್ತ ಸಂಬಂಧಿಗಳು, ಆತ್ಮೀಯ ಗೆಳೆಯರ ಸಮ್ಮುಖದಲ್ಲಿ ಟರ್ಕಿಯ ಬೋಡ್ರಮ್ ನಗರದಲ್ಲಿ ನುಸ್ರತ್ ಮತ್ತು ನಿಖಿಲ್ ಜೈನ್ ವಿವಾಹವಾಗಿದ್ದಾರೆ. ನುಸ್ರತ್ ತಂದೆ, ತಾಯಿ, ಸಹೋದರಿ ಹಾಗೂ ಹತ್ತಿರದ ಸಂಬಂಧಿಗಳು ಜೂನ್ 16ರಂದು ಬೋಡ್ರರಂಗೆ ತೆರಳಿದ್ದರು.

ಬಂಗಾಳಿ ಸಿನಿಮಾ ನಟಿ ನುಸ್ರತ್ 2019ರ ಲೋಕಸಭಾ ಚುನಾವಣೆಯಲ್ಲಿ ಬಾಸಿರ್ ಹಾತ್ ಕ್ಷೇತ್ರದಿಂದ ಸ್ಪರ್ಧಿಸಿ, ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರು. ತೃಣಮೂಲ ಕಾಂಗ್ರೆಸ್ ಸಂಸದೆ ಮದುವೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ತಪ್ಪಿಸಿಕೊಂಡಂತಾಗಿದೆ.

ಅಷ್ಟೇ ಅಲ್ಲ ನುಸ್ರತ್ ಗೆಳತಿ, ಸಹೋದ್ಯೋಗಿ ಸಂಸದೆ ಮಿಮಿ ಚಕ್ರವರ್ತಿ ಕೂಡಾ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಜಾದವ್ ಪುರ್ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್ ಸಂಸದೆಯಾಗಿ ಆಯ್ಕೆಯಾಗಿದ್ದರು. ಮಿಮಿ ಕೂಡಾ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಗೈರು ಹಾಜರಾಗಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ