ಟೈಗರ್‌ ಹನೀಫ್ ಹಸ್ತಾಂತರಕ್ಕೆ ಅಡ್ಡಗಾಲು ಹಾಕಿದ್ದು ಪಾಕ್ ಮೂಲದ ಮಾಜೀ ಗೃಹ ಸಚಿವ ಸಾಜಿದ್!

Team Udayavani, May 19, 2020, 11:33 PM IST

ಟೈಗರ್‌ ಹನೀಫ್ ಹಸ್ತಾಂತರಕ್ಕೆ ಅಡ್ಡಗಾಲು ಹಾಕಿದ್ದು ಪಾಕ್ ಮೂಲದ ಮಾಜೀ ಗೃಹ ಸಚಿವ ಸಾಜಿದ್!

ಲಂಡನ್‌: ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಬಂಟ ಹಾಗೂ ಗುಜರಾತ್‌ನಲ್ಲಿ ಸಂಭವಿಸಿದ್ದ ಅವಳಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಟೈಗರ್‌ ಹನೀಫ್ ನನ್ನು ಭಾರತ‌ಕ್ಕೆ ಹಸ್ತಾಂತರಿಸಲು ಯು.ಕೆ. ನಿರಾಕರಿಸಿರುವ ಹಿಂದೆ ಪಾಕಿಸ್ಥಾನ ಮೂಲದ ಇಂಗ್ಲಂಡ್ ರಾಜಕಾರಣಿಯ ಕೈವಾಡವಿರುವುದು ಸ್ಪಷ್ಟವಾಗಿದೆ.

ಭಾರತಕ್ಕೆ ಹನೀಫ್ ನನ್ನು ಹಸ್ತಾಂತರಿಸಿದರೆ ಆತನಿಗೆ ಚಿತ್ರಹಿಂಸೆ ನೀಡಲಾಗುತ್ತದೆ ಎಂದು ಹೇಳಿ ಪಾಕಿಸ್ಥಾನ ಮೂಲದ ಮಾಜೀ ಗೃಹ ಸಚಿವ ಸಾಜಿದ್‌ ಜಾವಿದ್‌ ಈಗ ಆತನನ್ನು ಗಡಿಪಾರು ಮಾಡುವ ಪ್ರಕ್ರಿಯೆಗೆ ಅಡ್ಡಗಾಲು ಹಾಕಿದ್ದಾರೆ.

2010ರ ಫೆಬ್ರವರಿಯಲ್ಲಿ ಲಂಡನ್‌ನಲ್ಲಿ ಬಂಧಿತನಾದ 57 ವರ್ಷದ ಹನೀಫ್ ಉಮರ್‌ ಜೀ ಪಟೇಲ್, ಅಂದಿನಿಂದ ಇಂದಿನವರೆಗೂ ಹಲವು ನೆಪಗಳನ್ನು ಹೇಳಿಕೊಂಡು ಲಂಡನ್‌ ನಲ್ಲೇ ಉಳಿಯಲು ನಡೆಸಿದ ಎಲ್ಲ ಯತ್ನವೂ ವಿಫ‌ಲವಾಗಿತ್ತು. 2012ರ ಜೂನ್‌ನಲ್ಲಿ ಮಾಜಿ ಗೃಹ ಸಚಿವೆ ಥೆರೇಸಾ ಮೇ ಅವರು ಹನೀಫ್ ನನ್ನು ಗಡಿಪಾರು ಮಾಡಲು ಆದೇಶಿಸಿದ್ದರು.

ಭಾರತ – ಯುಕೆ ಹಸ್ತಾಂತರ ಒಪ್ಪಂದದ ಪ್ರಕಾರ, ಹಸ್ತಾಂತರ ಕೋರಿಕೆಗೆ ಅಂತಿಮ ಮುದ್ರೆ ಒತ್ತುವ ಅಧಿಕಾರವಿರುವುದು ಗೃಹ ಸಚಿವರಿಗೆ. ಆ ಸಂದರ್ಭದಲ್ಲಿ ಗೃಹ ಸಚಿವರಾಗಿದ್ದ ಗೃಹ ಸಚಿವ ಸಾಜಿದ್‌ ಜಾವಿದ್‌, ಹನೀಫ್ ಗೆ ಚಿತ್ರಹಿಂಸೆ ನೀಡಲಾಗುತ್ತದೆ ಎಂಬುದನ್ನು ಅಸ್ತ್ರವಾಗಿಟ್ಟುಕೊಂಡು ಗಡಿಪಾರು ಪ್ರಕ್ರಿಯೆಗೆ ತಡೆದಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.

ಕನ್ಸರ್ವೇಟಿವ್ ಪಕ್ಷದ ಸಂಸದರಾಗಿರುವ ಸಾಜಿದ್ ಜಾವಿದ್ ಅವರು 2018 ರಿಂದ 2019ರವರೆಗೆ ಗೃಹ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯಕ್ಕೆ ಈ ಹುದ್ದೆಯನ್ನು ಪ್ರೀತಿ ಪಟೇಲ್ ಅವರು ನಿಭಾಯಿಸುತ್ತಿದ್ದಾರೆ. ಪ್ರೀತಿ ಅವರ ಹೆತ್ತವರು ಗುಜರಾತ್ ಮೂಲದವರಾಗಿದ್ದಾರೆ.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.