
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ
Team Udayavani, Feb 5, 2023, 11:42 AM IST

ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್ (79) ಇಂದು ನಿಧನರಾಗಿದ್ದಾರೆ.
ಯುಎಇನಲ್ಲಿರುವ ಅಮೆರಿಕನ್ ಆಸ್ಪತ್ರೆಯಲ್ಲಿ ರವಿವಾರ (ಫೆ. 5 ರಂದು) ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ. ದೀರ್ಘ ಕಾಲದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
2016 ರಿಂದ ಮುಷರಫ್ ದುಬೈನಲ್ಲಿ ವಾಸಿಸುತ್ತಿದ್ದರು. 1999 ರಿಂದ 2008ರ ವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿದ್ದರು. 2007ರಲ್ಲಿ ಸಂವಿಧಾನವನ್ನು ಅಮಾನತು ಮಾಡಿದ ಆರೋಪದಲ್ಲಿ ದೇಶದ್ರೋಹ ಪ್ರಕರಣ ಅವರ ಮೇಲಿತ್ತು. ಈ ಸಂಬಂಧ 2019 ರಲ್ಲಿ ಮರಣ ದಂಡನೆಯನ್ನು ವಿಧಿಸಲಾಗಿತ್ತು. ಆ ಬಳಿಕ ಅವರ ಶಿಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಭಾರತದ ವಿರುದ್ಧ ಕಾರ್ಗಿಲ್ ಯುದ್ಧವನ್ನು ಮಾಟಡಿ ಭಾರೀ ಮುಖಭಂಗವನ್ನು ಅನುಭವಿಸಿದ್ದರು.
ಮುಷರಫ್ ಆಗಸ್ಟ್ 11, 1943 ರಂದು ದೆಹಲಿಯಲ್ಲಿ ಜನಿಸಿದರು ಮತ್ತು ಕರಾಚಿಯ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪೂರ್ಣಗೊಳಿಸಿದರು. ಮಾಜಿ ಅಧ್ಯಕ್ಷರು ಲಾಹೋರ್‌ನ ಫಾರ್ಮನ್ ಕ್ರಿಶ್ಚಿಯನ್ ಕಾಲೇಜಿನಲ್ಲಿ ಉನ್ನತ ಶಿಕ್ಷಣವನ್ನು ಪಡೆದಿದ್ದರು.
ಟಾಪ್ ನ್ಯೂಸ್
