ಪತ್ರಿಕಾಗೋಷ್ಠಿಗೆ ತೆರಳುತ್ತಿದ್ದ ಪಾಕ್ ಮಾಜಿ ಪ್ರಧಾನಿ ಅಬ್ಬಾಸಿ ದಿಢೀರ್ ಬಂಧನ

Team Udayavani, Jul 18, 2019, 5:24 PM IST

ಇಸ್ಲಾಮಾಬಾದ್:ನೈಸರ್ಗಿಕ ಅನಿಲ ಆಮದು ಗುತ್ತಿಗೆಯಲ್ಲಿ ನಡೆದ ಕೋಟ್ಯಂತರ ರೂಪಾಯಿ ಅವ್ಯವಹಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಶಾಹಿದ್ ಖಾಕನ್ ಅಬ್ಬಾಸಿಯನ್ನು ಗುರುವಾರ ರಾಷ್ಟ್ರೀಯ ಹೊಣೆಗಾರಿಕಾ ಬ್ಯೂರೋ(ಎನ್ ಎಬಿ) ಬಂಧಿಸಿದೆ ಎಂದು ಪಾಕಿಸ್ತಾನ ಮೂಲದ ಡಾನ್ ನ್ಯೂಸ್ ವರದಿ ಮಾಡಿದೆ.

ಪತ್ರಿಕಾಗೋಷ್ಠಿ ನಡೆಸಲು ತೆರಳುತ್ತಿದ್ದ ಸಂದರ್ಭದಲ್ಲಿ ಅಧಿಕಾರಿಗಳು ಲಾಹೋರ್ ಹೊರವಲಯದಲ್ಲಿ ಬಂಧಿಸಿರುವುದಾಗಿ ವರದಿ ತಿಳಿಸಿದೆ. ಆರಂಭಿಕ ಹಂತದಲ್ಲಿ ಅಬ್ಬಾಸಿಯವರು ಬಂಧನಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎಂದು ಎನ್ ಎಬಿ ಅಧಿಕಾರಿಗಳು ಹೇಳಿದ್ದಾರೆ.

ಬಂಧನದ ಸುದ್ದಿಯ ಬೆನ್ನಲ್ಲೇ ಪಾಕಿಸ್ತಾನದ ಮುಸ್ಲಿಂ ಲೀಗ್ ನ ಮುಖಂಡ ಶಾಬಾಝ್ ಶರೀಫ್ ಸಾಮಾಜಿಕ ಜಾಲತಾಣದಲ್ಲಿ ಖಂಡನೆ ವ್ಯಕ್ತಪಡಿಸಿದ್ದಾರೆ.  ಎನ್ ಎಬಿ ಪಾಕಿಸ್ತಾನ್ ತೆಹ್ರೀಕ್ ಎ ಇನ್ಸಾಫ್ ಮುಖ್ಯಸ್ಥ, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೈಗೊಂಬೆಯಾಗಿದೆ ಎಂದು ಆರೋಪಿಸಿದ್ದಾರೆ.

ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಪಾಕಿಸ್ತಾನಕ್ಕೆ ಅಧಿಕಾರದ ಗದ್ದುಗೆ ಏರಿದ ನಂತರ ಏಪ್ರಿಲ್ ನಲ್ಲಿ ಮಾಜಿ ಪ್ರಧಾನಿ ಅಬ್ಬಾಸಿ, ಮಾಜಿ ವಿತ್ತ ಸಚಿವ ಇಸ್ಮಾಯಿಲ್ ಹಾಗೂ ಇತರ ಐದು ಮಂದಿಗೆ ವಿದೇಶ ಪ್ರವಾಸಕ್ಕೆ ನಿಷೇಧ ಹೇರಲಾಗಿತ್ತು ಎಂದು ವರದಿ ವಿವರಿಸಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ