ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ; ಮತದಾರರನ್ನ ಕರೆದೊಯ್ಯುತ್ತಿದ್ದ ಬಸ್ ಗಳ ಮೇಲೆ ಗುಂಡಿನ ದಾಳಿ

Team Udayavani, Nov 16, 2019, 10:12 AM IST

ಕೊಲಂಬೋ:ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಗೆ ಮತಚಲಾಯಿಸಲು ಆಗಮಿಸುತ್ತಿದ್ದ ಮತದಾರರ ಬಸ್ ಗಳ ಮೇಲೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಶ್ರೀಲಂಕಾದ ವಾಯುವ್ಯ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಯಾವುದೇ ಸಾವು-ನೋವಿನ ಬಗ್ಗೆ ತಿಳಿದು ಬಂದಿಲ್ಲ. ದಾಳಿಕೋರರು ರಸ್ತೆಯಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿ ರಸ್ತೆಯನ್ನು ಅಡ್ಡಗಟ್ಟಿ ಬಸ್ ಗಳ ಮೇಲೆ ದಾಳಿ ನಡೆಸಲು ಹೊಂಚು ಹಾಕುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಉತ್ತರ ಕೊಲಂಬೋದಿಂದ ಸುಮಾರು 240 ಕಿಲೋ ಮೀಟರ್ ದೂರದಲ್ಲಿರುವ ತಂತ್ರಿಮಲೆ ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ, ಬಂದೂಕುಧಾರಿಗಳು ದಾಳಿ ನಡೆಸಿ, ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವುದಾಗಿ ತಿಳಿಸಿದ್ದಾರೆ. ಅಲ್ಪಸಂಖ್ಯಾತ ಮುಸ್ಲಿಂ ಮತದಾರರನ್ನು ಕರೆದೊಯ್ಯುತ್ತಿದ್ದ ಬಸ್ ಗಳ ಮೇಲೆ ದಾಳಿ ನಡೆದಿದೆ ಎಂದು ತಿಳಿಸಿದ್ದಾರೆ.

ಘಟನೆಯಲ್ಲಿ ಎರಡು ಬಸ್ ಗಳ ಗಾಜು ಪುಡಿಯಾಗಿರುವುದಾಗಿ ವರದಿ ಹೇಳಿದೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ