ತಾಲಿಬಾನ್ ‍ದಾಳಿ ಸಾಧ್ಯತೆ : ಕಾಬೂಲ್ ವಿಮಾನ ನಿಲ್ದಾಣದಿಂದ ದೂರವಿರಿ : ಅಮೆರಿಕಾ


Team Udayavani, Aug 26, 2021, 12:53 PM IST

“High Terror Threat” At Kabul Airport, “Leave Immediately”: US, Allies

ಪ್ರಾತಿನಿಧಿಕ ಚಿತ್ರ

ವಾಷಿಂಗ್ಟನ್ : ಅಫ್ಗಾನಿಸ್ತಾನವನ್ನು ತಾಲಿಬಾನ್ ಉಗ್ರ ಪಡೆ ವಶಪಡಿಸಿಕೊಂಡ ನಂತರ ಅಲ್ಲಿ ತಾಲಿಬಾನ್ ನಡೆಸುತ್ತಿರುವ ಹಿಂಸಾಚಾರವನ್ನು ಸಹಿಸಲು ಸಾಧ್ಯವಾಗದೇ ಅಲ್ಲಿ ವಾಸ್ತವ್ಯ ಹೂಡಿದ್ದ ವಿದೇಶಿಗರು ಅಫ್ಗಾನ್ ನನ್ನು ತೊರೆಯಲು ಹಾತೊರೆಯುತ್ತಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾಬೂಲ್ ವಿಮಾನ ನಿಲ್ದಾಣದತ್ತ ಜನರು ಜಮಾಯಿಸಿದ್ದಾರೆ.

ಈ ನಡುವೆ ಅಮೆರಿಕಾ ಅಪಾಯದ ಎಚ್ಚರಿಕೆಯನ್ನು ನೀಡಿದ್ದು, ಕಾಬೂಲ್ ವಿಮಾನ ನಿಲ್ದಾಣದಿಂದ ದೂರವಿರಲು ತನ್ನ ನಾಗರಿಕರಿಗೆ ಸೂಚಿಸಿದೆ  ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇದನ್ನೂ ಓದಿ : ವಾಯ್ಸ್ ಮೆಸೇಜ್ ಮಾಡಿ, ಕಾರು ಸಮೇತ ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ

ಕಾಬೂಲ್ ವಿಮಾನ ನಿಲ್ದಾಣದ ಮೇಲೆ ತಾಲಿಬಾನ್ ದಾಳಿ ಎಚ್ಚರಿಕೆ..?!

ಅಫ್ಗಾನ್ ನನ್ನು ತೊರೆಯುವ ಉದ್ದೇಶದಿಂದ ಏರ್ ಲಿಫ್ಟ್ ಗಾಗಿ ಸಾವಿರಾರು ಮಂದಿ ಕಾಬೂಲ್ ವಿಮಾನ ನಿಲ್ದಾಣದ ಬಳಿ ಧಾವಿಸುತ್ತಿದ್ದಾರೆ.ಇತ್ತ ತಾಲಿಬಾನ್ ಉಗ್ರ ಸಂಘಟನೆ ತನ್ನ ಹೆಚ್ಚುವರಿ ಪಡೆಗಳನ್ನು ವಿಮಾನ ನಿಲ್ದಾಣದ ಸುತ್ತಮುತ್ತ ನಿಯೋಜಿಸುತ್ತಿದ್ದು, ಪರೋಕ್ಷವಾಗಿ ದಾಳಿಯ ಎಚ್ಚರಿಕೆ ನೀಡಿದೆ ಎಂದು ಅಮೆರಿಕಾ ಹೇಳಿದೆ. ಕಾಬೂಲ್ ವಿಮಾನ ನಿಲ್ದಾಣದಿಂದ ದೂರ ಸರಿಯಿರಿ ಎಂದು ಅಮೆರಿಕಾ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದೆ. ಇನ್ನು, ಅಮೆರಿಕಾ ಮಾತ್ರವಲ್ಲದೇ, ಬ್ರಿಟನ್ ಮತ್ತು ಆಸ್ಟ್ರೇಲಿಯಾ ಕೂಡ ತಮ್ಮ ನಾಗರಿಕರಿಗೆ ಎಚ್ಚರಿಕೆ ನೀಡಿವೆ ಎಂದು ವರದಿಯಾಗಿವೆ.

ಕಾಬೂಲ್‌ನಲ್ಲಿರುವ ಅಮೆರಿಕಾ ರಾಯಭಾರ ಕಚೇರಿಯಿಂದ ಹೊರಡಿಸಲಾದ ಭದ್ರತಾ ಎಚ್ಚರಿಕೆಯ ಪ್ರಕಾರ, ಕಾಬೂಲ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯು ಈ ಸಮಯದಲ್ಲಿ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸದಂತೆ ಅಮೆರಿಕಾ ನಾಗರಿಕರಿಗೆ ಸೂಚಿಸಿದೆ.

ಕಾಬೂಲ್‌ನ ವಿಮಾನ ನಿಲ್ದಾಣದ ಹೊರಗಿನ ಗೇಟ್‌ನಲ್ಲಿ ಯುಎಸ್ ನಾಗರಿಕರು ಬೆದರಿಕೆಗಳ ಕಾರಣದಿಂದ “ತಕ್ಷಣವೇ” ಹೊರಹೋಗುವಂತೆ ವಿದೇಶಾಂಗ ಇಲಾಖೆಯು ಎಚ್ಚರಿಕೆಯನ್ನು ನೀಡಿದೆ. ಇದಲ್ಲದೆ ಕಾಬೂಲ್‌ನಲ್ಲಿರುವ ಯುಎಸ್ ರಾಯಭಾರ ಕಚೇರಿಯಿಂದ ಹೊರಡಿಸಲಾದ ಭದ್ರತಾ ಎಚ್ಚರಿಕೆಯಲ್ಲಿ, ಎಬಿ ಗೇಟ್, ಈಸ್ಟ್ ಗೇಟ್ ಅಥವಾ ಉತ್ತರ ಗೇಟ್‌ ನಲ್ಲಿರುವ ಯುಎಸ್ ನಾಗರಿಕರು ತಕ್ಷಣವೇ ಆ ಸ್ಥಳಗಳನ್ನೂ ತೊರೆಯುವಂತೆ ಸೂಚಿಸಿದೆ ಎಂದು ವರದಿಯಾಗಿದೆ.

ವಿದೇಶಿ ಪ್ರಜೆಗಳ ಮೇಲೆ ತಾಲಿಬಾನ್ ದಾಳಿ

ಕಾಬೂಲ್ ವಿಮಾನ ನಿಲ್ದಾಣದ ಹೊರ ಭಾಗದಲ್ಲಿರುವ ವಿದೇಶಿ ಪ್ರಜೆಗಳ ಮೇಲೆ ತಾಲಿಬಾನ್ ಉಗ್ರರು ದಾಳಿ ಮಾಡುತ್ತಿದ್ದಾರೆ. ಇದೇ ಕಾರಣದಿಂದಾಗಿ ಕಾಬೂಲ್ ವಿಮಾನ ನಿಲ್ದಾಣದಿಂದ ದೂರವಿರುವಂತೆ ನಾಗರಿಕರಿಗೆ ಎಚ್ಚರಿಕೆ ನೀಡಿದ್ದೇವೆ ಎಂದು ಕಾಬೂಲ್‌ನಲ್ಲಿರುವ ಯುಎಸ್ ರಾಯಭಾರ ಕಚೇರಿ ಮಾಹಿತಿ ನೀಡಿದೆ.

ಇದನ್ನೂ ಓದಿ : ಮೊಘಲರು ದುಷ್ಟರಲ್ಲ…ನಿಜವಾಗಿ ಈ ದೇಶ ಕಟ್ಟಿದ್ದು ಮೊಘಲರು: ನಿರ್ದೇಶಕ ಕಬೀರ್ ಖಾನ್

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.