ಪಾಕಿಸ್ತಾನ: ವಿವಾಹ ಮಂಟಪದಿಂದಲೇ ಹಿಂದೂ ಯುವತಿಯನ್ನು ಅಪಹರಿಸಿದ ಮುಸ್ಲಿಂ ಯುವಕ!
ಹಾಲಾ ನಗರದಲ್ಲಿ ಹಿಂದೂ ಯುವತಿಯನ್ನು ಮದುವೆ ಮಂಟಪದಿಂದಲೇ ಅಪಹರಿಸಿಲಾಗಿತ್ತು
Team Udayavani, Jan 27, 2020, 1:27 PM IST
ಇಸ್ಲಾಮಾಬಾದ್: ಮದುವೆ ಮನೆಯಿಂದಲೇ ಹಿಂದೂ ಯುವತಿಯನ್ನು ಅಪಹರಿಸಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಮಾಟಿಯಾರಿ ಜಿಲ್ಲೆಯಲ್ಲಿ ನಡೆದಿದ್ದು, 24ವರ್ಷದ ಹಿಂದು ಯುವತಿ ಅಪಹರಣಕ್ಕೊಳಗಾಗಿದ್ದು, ಆಕೆಯನ್ನು ಇಸ್ಲಾಂಗೆ ಮತಾಂತರಿಸಿ ಮುಸ್ಲಿಂ ಯುವಕನೊಬ್ಬ ವಿವಾಹವಾಗಿರುವುದಾಗಿ ವರದಿ ತಿಳಿಸಿದೆ.
ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯರು, ಮಹಿಳೆಯರ ಅಪಹರಣ ಮತ್ತು ಮತಾಂತರ ದೊಡ್ಡ ಪಿಡುಗಾಗಿದೆ ಎಂದು ವರದಿ ವಿವರಿಸಿದೆ. ಕರಾಚಿಯಿಂದ 215 ಕಿಲೋ ಮೀಟರ್ ದೂರದಲ್ಲಿರುವ ಮಾಟಿಯಾರಿ ಜಿಲ್ಲೆಯ ಹಾಲಾ ನಗರದಲ್ಲಿ ಹಿಂದೂ ಯುವತಿಯನ್ನು ಮದುವೆ ಮಂಟಪದಿಂದಲೇ ಅಪಹರಿಸಿಲಾಗಿತ್ತು ಎಂದು ವರದಿ ಹೇಳಿದೆ.
ಹಾಲಾ ನಗರದಲ್ಲಿ ಮಗಳ ವಿವಾಹ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಶಾರುಖ್ ಗುಲ್ ಎಂಬಾತ ಹಲವಾರು ವ್ಯಕ್ತಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಬಂದು ಮಗಳನ್ನು ಹಾಡಹಗಲೇ ಅಪಹರಿಸಿಕೊಂಡು ಹೋಗಿರುವುದಾಗಿ ಯುವತಿಯ ತಂದೆ ಕಿಶೋರ್ ದಾಸ್ ಆರೋಪಿಸಿದ್ದಾರೆ.
ಕಳೆದ ಹದಿನೈದು ದಿನಗಳಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಜನವರಿ 15ರಂದು 15 ವರ್ಷದ ಹಿಂದೂ ಬಾಲಕಿಯನ್ನು ಜಾಕೋಬಾಬಾದ್ ಜಿಲ್ಲೆಯಲ್ಲಿ ಅಪಹರಿಸಿದ್ದ ಘಟನೆ ನಡೆದಿತ್ತು. ಬಳಿಕ ಆಕೆಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿತ್ತು ಎಂದು ಪಿಟಿಐ ವರದಿ ಮಾಡಿದೆ. ಇಸ್ಲಾಂಗೆ ಮತಾಂತರಗೊಳಿಸಿ ಅಲಿ ರಾಝಾ ಸೋಳಂಗಿ ಎಂಬ ಮುಸ್ಲಿಂ ವ್ಯಕ್ತಿ ಜತೆ ವಿವಾಹ ನೆರವೇರಿಸಲಾಗಿತ್ತು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು