ವಿಶ್ವಸಂಸ್ಥೆಯಲ್ಲಿ ಮುಖಭಂಗ ಬೆನ್ನಲ್ಲೇ ಪಾಕ್ ಗೆ 440 ದಶಲಕ್ಷ ನೆರವು ಕಡಿತಗೊಳಿಸಿದ ಅಮೆರಿಕ!
Team Udayavani, Aug 17, 2019, 2:00 PM IST
ವಾಷಿಂಗ್ಟನ್:ಕಾಶ್ಮೀರದ 370ನೇ ವಿಧಿ ರದ್ದುಗೊಳಿಸಿದ್ದನ್ನು ವಿರೋಧಿಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮೊರೆ ಹೋಗಿ ಮುಖಭಂಗಕ್ಕೆ ಈಡಾಗಿದ್ದ ಪಾಕಿಸ್ತಾನಕ್ಕೆ ಇದೀಗ ಅಮೆರಿಕದಿಂದ ಮತ್ತೊಂದು ಭಾರೀ ಹೊಡೆತ ಬಿದ್ದಿದೆ. ಪಾಕಿಸ್ತಾನಕ್ಕೆ ಅಮೆರಿಕ ನೀಡುತ್ತಿದ್ದ 440 ಮಿಲಿಯನ್ ಡಾಲರ್ ಆರ್ಥಿಕ ನೆರವನ್ನು ಕಡಿತಗೊಳಿಸಿದೆ. ಆ ನಿಟ್ಟಿನಲ್ಲಿ ಅಮೆರಿಕದಿಂದ ಪಾಕಿಸ್ತಾನಕ್ಕೆ ದೊರೆಯುತ್ತಿದ್ದ ಹಣಕಾಸಿನ ನೆರವು 4.1 ಶತಕೋಟಿ ಡಾಲರ್ ಗೆ ಇಳಿದಂತಾಗಿದೆ.
ಪಾಕಿಸ್ತಾನ ಸಹಭಾಗಿತ್ವ ವೃದ್ದಿ ಒಪ್ಪಂದ(ಪಿಇಪಿಎ) 2010ರ ಪ್ರಕಾರ ಅಮೆರಿಕ ಪಾಕಿಸ್ತಾನಕ್ಕೆ ಹಣಕಾಸಿನ ನೆರವು ನೀಡುತ್ತಿತ್ತು ಎಂದು ಎಕ್ಸ್ ಪ್ರೆಸ್ ಟ್ರೈಬ್ಯೂನ್ ವರದಿ ಮಾಡಿದೆ.
ಪಾಕಿಸ್ತಾನ ಅಧ್ಯಕ್ಷ ಇಮ್ರಾನ್ ಖಾನ್ ವಾಷಿಂಗ್ಟನ್ ಗೆ ಭೇಟಿ ನೀಡಲು ಮೂರು ವಾರ ಇರುವಾಗಲೇ ಅಮೆರಿಕ ಆರ್ಥಿಕ ನೆರವು ಕಡಿತಗೊಳಿಸಿರುವ ಬಗ್ಗೆ ಮಾಹಿತಿ ನೀಡಿದೆ ಎಂದು ವರದಿ ವಿವರಿಸಿದೆ.
2010ರಲ್ಲಿ ಪಿಇಪಿಎ ಒಪ್ಪಂದಕ್ಕೆ ಸಹಿ ಹಾಕಿದ್ದು, ಅದರನ್ವಯ ಪಾಕಿಸ್ತಾನಕ್ಕೆ ಅಮೆರಿಕ 5 ವರ್ಷಗಳ ಕಾಲದಲ್ಲಿ 7.5 ಶತಕೋಟಿ ಡಾಲರ್ ಆರ್ಥಿಕ ನೆರವು ನೀಡಬೇಕಾಗಿತ್ತು. 2009ರಲ್ಲಿ ಕೆರ್ರಿ ಲುಗಾರ್ ಬೆರ್ಮನ್(ಕೆಎಲ್ ಬಿ) ನಿರ್ಣಯವನ್ನು ಅಮೆರಿಕ ಕಾಂಗ್ರೆಸ್ ನಲ್ಲಿ ಅಂಗೀಕಾರಗೊಂಡಿತ್ತು. ಕೆಎಲ್ ಬಿ ಪ್ರಕಾರ ಪಾಕಿಸ್ತಾನಕ್ಕೆ 4.5 ಶತಕೋಟಿ ಡಾಲರ್ ಹಣಕಾಸು ನೆರವು ಸಿಗಬೇಕಾಗಿದ್ದು, ಇದೀಗ ಕಡಿತಗೊಂಡ ಪರಿಣಾಮ 4.1 ಶತಕೋಟಿ ಡಾಲರ್ ಗೆ ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ