ಮಾರ್ಕೋನಿ ಪ್ರಶಸ್ತಿ ಗಳಿಸಿದ ಕನ್ನಡಿಗ ಅರುಣ್
Team Udayavani, Jun 17, 2017, 11:40 AM IST
ವಾಷಿಂಗ್ಟನ್: ಕನ್ನಡಿಗ, ಅಂಕೋಲಾದ ಅರುಣ್ ನೇತ್ರಾವಳಿ ಅವರು 2017ನೇ ಸಾಲಿನ ಮಾರ್ಕೋನಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಡಿಜಿಟಲ್ ಟೀವಿ, ಹೈಡೆಫಿನಿಶನ್ ಟಿವಿ ಮತ್ತು ಸ್ಟ್ರೀಮಿಂಗ್ ವಿಡಿಯೋಗಳಲ್ಲಿ ವ್ಯಾಪಕ ಸಂಶೋಧನೆಗಳ ಮೂಲಕ ಡಿಜಿಟಲ್ ವಿಡಿಯೋ ಕ್ರಾಂತಿಗೆ ಅರುಣ್ ಅವರು ಗಣನೀಯ ಕೊಡುಗೆ ನೀಡಿದ್ದಾರೆ. ಸದ್ಯ ಅಮೆರಿಕದಲ್ಲಿ ವಾಸವಿರುವ ಅರುಣ್ ಅವರು ಮೂಲತಃ ಉತ್ತರ ಕನ್ನಡದ ಅಂಕೋಲದವರಾಗಿದ್ದು, ಮುಂಬೈ ಐಐಟಿಯಲ್ಲಿ ಪದವಿ ಪಡೆದಿದ್ದಾರೆ.
1967ರಲ್ಲಿ ಅವರು ಅಮೆರಿಕದ ರೈಸ್ ವಿವಿಯಲ್ಲಿ ಡಾಕ್ಟರೆಟ್ ಪದವಿ ಪಡೆದಿದ್ದು, ಪ್ರಸಿದಟಛಿ ಬೆಲ್ ಲ್ಯಾಬ್ ನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ತಮ್ಮ ಸಂಶೋಧನೆ ಮೂಲಕ ಮಾನವ ಜನಾಂಗಕ್ಕೆ ನೀಡಿದ ಕೊಡುಗೆಗಾಗಿ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಮಾರ್ಕೋನಿ ಪ್ರಶಸ್ತಿ ನೀಡುವ ಸಮಿತಿ ಹೇಳಿದೆ. ಪ್ರಶಸ್ತಿ ಪುರಸ್ಕೃತರಿಗೆ 65 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರ ಸಿಗಲಿದೆ. ರೇಡಿಯೋ ಆವಿಷ್ಕರಿಸಿದ ಮಾರ್ಕೋನಿ ಅವರ ಹೆಸರಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ