ಅಮೆರಿಕ ವಿಮಾನ ನಿಲ್ದಾಣದಲ್ಲಿ ಕಳ್ಳತನ “ಈ” ಕೋಟ್ಯಧೀಶ ಭಾರತೀಯ ಮೂಲದ ಹೋಟೆಲ್ ಉದ್ಯಮಿ ಚಟ!


Team Udayavani, Aug 27, 2019, 11:05 AM IST

Chawla

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನ ಮಾಜಿ ಪಾಲುದಾರ, ಭಾರತೀಯ ಮೂಲದ ಹೋಟೆಲ್ ಉದ್ಯಮಿ ಅಮೆರಿಕದ ವಿಮಾನ ನಿಲ್ದಾಣದಲ್ಲಿ ಲಗೇಜ್ ಕದ್ದು ಸಿಕ್ಕಿಬಿದ್ದ ಘಟನೆ ನಡೆದಿದೆ.

ಈ ಹಿಂದೆ ಡೊನಾಲ್ಡ್ ಟ್ರಂಪ್ ಕುಟುಂಬದ ಒಡೆತನದ ನಾಲ್ಕು ಹೋಟೆಲ್ ಗಳಲ್ಲಿ ದಿನೇಶ್ ಚಾವ್ಲಾ ಪಾಲುದಾರರಾಗಿದ್ದರು. ಅಷ್ಟೇ ಅಲ್ಲ ಚಾವ್ಲಾ ಗ್ರೂಪ್ ಆಫ್ ಹೋಟೆಲ್ ಗಳ ಸಿಇಒ ಕೂಡಾ ಹೌದು. ಕಳೆದ ವಾರ ಮೆಂಫೀಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಾವ್ಲಾ ಕದ್ದ ಸೂಟ್ ಕೇಸ್ ಅನ್ನು ಕಾರಿನೊಳಗೆ ಇಟ್ಟುಕೊಂಡಿದ್ದು ಪೊಲೀಸರ ಗಮನಕ್ಕೆ ಬಂದಿತ್ತು. ಬಳಿಕ ಚಾವ್ಲಾ ವಿಮಾನದಲ್ಲಿ ಪ್ರಯಾಣಿಸಿದ್ದರು.

ವಿಮಾನ ನಿಲ್ದಾಣ ಪೊಲೀಸರು ಕಾರನ್ನು ಶೋಧಿಸಿದಾಗ ಸೂಟ್ ಕೇಸ್ ಪತ್ತೆಯಾಗಿತ್ತು ಎಂದು ದ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಚಾವ್ಲಾ ಹಿಂತಿರುಗಿದ ವೇಳೆ ಮೆಂಫೀಸ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಎರಡು ಬ್ಯಾಗ್ ಅನ್ನು ಕದ್ದಿರುವುದಾಗಿ ತಪ್ಪೊಪ್ಪಿಕೊಂಡಿದ್ದ. ಅಂದಾಜು ಮೊತ್ತ 4 ಸಾವಿರ ಡಾಲರ್ ಮೌಲ್ಯದ ವಸ್ತುಗಳಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಹೀಗೆ ಹಲವು ಬಾರಿ ಲಗೇಜ್ ಅನ್ನು ಕಳ್ಳತನ ಮಾಡುತ್ತಿರುವುದಾಗಿ ಚಾವ್ಲಾ ತನಿಖೆ ವೇಳೆ ಬಾಯ್ಬಿಟ್ಟಿದ್ದು, ಉಳಿದ ಕಳ್ಳತನದ ಬಗ್ಗೆ ಹೆಚ್ಚಿನ ವಿವರ ನೀಡಿಲ್ಲ ಎಂದು ವರದಿ ವಿವರಿಸಿದೆ. ಲಗೇಜ್ ಕಳ್ಳತನ ಮಾಡುವುದು ತಪ್ಪು ಎಂಬುದು ಗೊತ್ತಿತ್ತು, ಆದರೆ ಕುತೂಹಲ ಮತ್ತು ರೋಮಾಂಚನಕ್ಕಾಗಿ ಈ ಕೃತ್ಯ ಎಸಗುತ್ತಿರುವುದಾಗಿ ಚಾವ್ಲಾ ಹೇಳಿರುವುದಾಗಿ ವರದಿ ತಿಳಿಸಿದೆ.

ಚಾವ್ಲಾ ಹಾಗೂ ಸಹೋದರ ಸುರೇಶ್ ಚಾವ್ಲಾ ಡೆಲ್ಟಾದಲ್ಲಿ ಗ್ರೂಪ್ ಆಫ್ ಹೋಟೆಲ್ ಉದ್ಯಮ ನಡೆಸುತ್ತಿದ್ದಾರೆ. ಕ್ಲೇವ್ ಲ್ಯಾಂಡ್ ನಲ್ಲಿ ಐಶಾರಾಮಿ ಹೋಟೆಲ್ ಹೊಂದಿದ್ದಾರೆ ಎಂದು ವರದಿ ಹೇಳಿದೆ.

1988ರಿಂದಲೂ ಟ್ರಂಪ್ ಜೊತೆ ಚಾವ್ಲಾ ಕುಟುಂಬಕ್ಕೆ ನಂಟು ಬೆಳೆದಿತ್ತು. 88ರಲ್ಲಿ ಚಾವ್ಲಾ ತಂದೆ ಗ್ರೀನ್ ವುಡ್ ನಲ್ಲಿ ಉದ್ಯಮ ನಡೆಸಲು ಟ್ರಂಪ್ ನೆರವು ಕೇಳಿದ್ದರು. ಅಲ್ಲಿಂದ ಟ್ರಂಪ್ ಮತ್ತು ಚಾವ್ಲಾ ಕುಟುಂಬ ನಿಕಟವರ್ತಿಯಾಗಿದ್ದು, ಹಲವು ಹೋಟೆಲ್ ಗಳಲ್ಲಿ ಪಾಲುದಾರರು ಕೂಡಾ ಆಗಿದ್ದರು. ಆದರೆ 2019ರ ಫೆಬ್ರುವರಿಯಲ್ಲಿ ಟ್ರಂಪ್ ಸಹೋದರರಾದ ಟ್ರಂಪ್ ಜ್ಯೂನಿಯರ್ ಹಾಗೂ ಎರಿಕ್ ಪಾಲುದಾರಿಕೆಯ ಶೇರುಗಳನ್ನು ವಾಪಸ್ ಪಡೆದಿದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.