ಎಚ್1ಬಿ ನಿಯಮ ಬದಲು
Team Udayavani, Feb 23, 2019, 12:30 AM IST
ವಾಷಿಂಗ್ಟನ್: ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳ ಮಾಹಿತಿ ತಂತ್ರಜ್ಞಾನ ಉದ್ಯೋಗಿಗಳ ಸಂಗಾತಿಗಳಿಗೆ ನೀಡುವ ಎಚ್1ಬಿ ವೀಸಾ ನೀಡಿಕೆ ಕ್ರಮದಲ್ಲಿ ಬದಲು ಮಾಡುವ ಸರ್ಕಾರದ ಪ್ರಸ್ತಾಪ ಸ್ವೀಕೃತವಾಗಿದೆ ಎಂದು ಶ್ವೇತ ಭವನ ತಿಳಿಸಿದೆ. ಅಮೆರಿಕದ ಗೃಹ ಸಚಿವಾಲಯ ಈ ಪ್ರಸ್ತಾವನೆ ಕಳುಹಿಸಿ ಕೊಟ್ಟಿದೆ. ಒಂದು ವೇಳೆ ಈ ಕ್ರಮಕ್ಕೆ ಒಪ್ಪಿಗೆ ಸಿಕ್ಕಿದರೆ 90 ಸಾವಿರ ಮಂದಿಗೆ ಅನನುಕೂಲ ಉಂಟಾಗಲಿದೆ. ಈ ಪೈಕಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲಿದ್ದಾರೆ. ಶ್ವೇತ ಭವನ ಪರಿಷ್ಕೃತ ನಿಯಮಗಳನ್ನು 30 ದಿನಗಳ ಒಳಗಾಗಿ ಕೋರ್ಟ್ನ ರಿಜಿಸ್ಟ್ರಿಯಲ್ಲಿ ಪ್ರಕಟಿಸಬೇಕು. ಆಗ ಮಾತ್ರ ಹೊಸ ನಿಯಮ ಜಾರಿಗೆ ಬರುತ್ತವೆ. ಭಾರತೀಯ ಮೂಲದ ಅಮೆರಿಕ ಸಂಸದರಾದ ಕಮಲಾ ಹ್ಯಾರಿಸ್ ಸೇರಿದಂತೆ ಹಲವು ಮತ್ತು ಸಿಲಿಕಾನ್ ವ್ಯಾಲಿಯ ಪ್ರಮುಖ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕಂಪನಿಗಳು ಈ ಕ್ರಮದಿಂದ ಅಮೆರಿಕದ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ ಎಂದು ಈಗಾಗಲೇ ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ