
ಮಿತಿಮೀರಿದ ನಿರುದ್ಯೋಗ; ಇರಾಕ್ ನಲ್ಲಿ ಭುಗಿಲೆದ್ದ ಪ್ರತಿಭಟನೆ; ಸೇನಾ ದಾಳಿಗೆ ಐವರು ಬಲಿ
Team Udayavani, Nov 6, 2019, 7:15 PM IST

ಬಾಗ್ದಾದ್: ಇರಾಕ್ ರಾಜಧಾನಿಯಲ್ಲಿ ಸರ್ಕಾರದ ವಿರೋಧಿ ಧೋರಣೆ ಖಂಡಿಸಿ ಸಾವಿರಾರು ಮಂದಿ ಪ್ರತಿಭಟನೆ ನಡೆಸುತ್ತಿದ್ದು, ಇರಾಕ್ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪ್ರಧಾನಿ ಕಚೇರಿ ಸಮೀಪದಿಂದ 500 ಮೀಟರ್ ದೂರದಲ್ಲಿದ್ದ ಪ್ರತಿಭಟನಾಕಾರರ ಮೇಲೆ ಗುಂಡಿನ ಸುರಿಮಳೆಗೆರೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಇರಾಕ್ ಸೇನಾಪಡೆ ಉಮ್ಮ ಖ್ವಾಸ್ರ ಬಂದರು ಪ್ರದೇಶದ ದ್ವಾರದಲ್ಲಿ ಬಿಗಿ ಕಾವಲು ಕಾಯುತ್ತಿದ್ದು, ಪ್ರತಿಭಟನಾಕಾರರು ರಸ್ತೆ ಬಂದ್ ಮಾಡಿದ್ದು, ಸೆಂಟ್ರಲ್ ಬಾಗ್ದಾದ್ ನಲ್ಲಿ ಸಾವಿರಾರು ಜನರು ಪ್ರತಿಭಟನೆ, ಹಿಂಸಾಚಾರದಲ್ಲಿ ತೊಡಗಿದ್ದಾರೆ.
ಇರಾಕ್ ನಲ್ಲಿ ಮಿತಿ ಮೀರಿರುವ ಭ್ರಷ್ಟಾಚಾರ, ನಿರುದ್ಯೋಗ ಸಮಸ್ಯೆ ಹಾಗೂ ಕಳಪೆ ಸಾರ್ವಜನಿಕ ಸೇವೆಯಿಂದ ಜನರು ಸರ್ಕಾರದ ವಿರುದ್ಧ ರೊಚ್ಚಿಗೆದ್ದಿರುವುದಾಗಿ ವರದಿ ವಿವರಿಸಿದೆ. ಪ್ರತಿಭಟನಾಕಾರರ ಪರವಾಗಿ ರಾಜಕೀಯ ಮುಖಂಡರು ಅನುಕಂಪ ವ್ಯಕ್ತಪಡಿಸಿದ್ದು, ಸರ್ಕಾರ ಹಾಗೂ ಪ್ರತಿಭಟನಾಕಾರರ ಹಿಂಸಾಚಾರವನ್ನು ಖಂಡಿಸಿದ್ದು, ಕೂಡಲೇ ಪ್ರತಿಭಟನೆಯನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀಲಂಕಾದಂತೆಯೇ ದಿವಾಳಿಯಾಗುವಂಚಿಗೆ ಪಾಕ್

ಹೆಚ್ಚುತ್ತಿದೆ ದೇಗುಲ ದಾಳಿ; ಖಲಿಸ್ಥಾನ ಪ್ರತ್ಯೇಕತಾವಾದಿಗಳ ಉಪಟಳ

ಕೆನಡಾದ ಹಿಂದೂ ದೇವಸ್ಥಾನದಲ್ಲಿ ಭಾರತ ವಿರೋಧಿ ಬರಹಗಳು; ವ್ಯಾಪಕ ಆಕ್ರೋಶ

1000 ಮಂದಿಯ ಕಣ್ಣ ದೃಷ್ಟಿ ಬರಲು ಹಣ ಸಹಾಯ ಮಾಡಿದ ಮಿ.ಬೀಸ್ಟ್ : ಅಂಧರ ಬಾಳಿಗೆ ಬೆಳಕಾದ ಯೂಟ್ಯೂಬರ್

“ಮಾಹಿತಿ ಯುದ್ಧ ನಡೆಸುತ್ತಿದೆ..” ಬಿಬಿಸಿ ಡಾಕ್ಯುಮೆಂಟರಿ ಪ್ರಕರಣದಲ್ಲಿ ಭಾರತದ ಬೆಂಬಲಕ್ಕೆ ನಿಂತ ರಷ್ಯಾ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
